ರಾಷ್ಟ್ರಗೀತೆಗೆ ಎದ್ದು ನಿಲ್ಲದ ಆರೋಪ; ಇಬ್ಬರು ಕಾಶ್ಮೀರಿಗಳ ಬಂಧನ
ರಾಷ್ಟ್ರಗೀತೆಗೆ ಅವಮಾನ ಮಾಡಿದ ಆರೋಪದ ಮೇಲೆ ಇಬ್ಬರು ಕಾಶ್ಮೀರಿ ಯುವಕರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ.
ಜಮ್ಮು: ರಾಷ್ಟ್ರಗೀತೆಗೆ ಅವಮಾನ ಮಾಡಿದ ಆರೋಪದ ಮೇಲೆ ಇಬ್ಬರು ಕಾಶ್ಮೀರಿ ಯುವಕರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ.
ಸಿನೆಮಾಗೆ ಮುಂಚಿತವಾಗಿ ಪ್ರಸಾರವಾದ ರಾಷ್ಟ್ರಗೀತೆಗೆ ಎದ್ದು ನಿಂತು ಗೌರವ ತೋರದ್ದಕ್ಕೆ ಕಾಶ್ಮೀರ ಕಣಿವೆಯ ಅನಂತನಾಗ್ ಮತ್ತು ಕುಪ್ವಾರ ಜಿಲ್ಲೆಗಳ ಇಬ್ಬರು ಯುವಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
"ರಾಷ್ಟ್ರೀಯ ಗೌರವ ಧಕ್ಕೆಗೆ ಪ್ರತಿಬಂಧ ಕಾಯ್ದೆ ೧೯೭೧ ರ ವಿಭಾಗ ೨/೩ ಅಡಿಯಲ್ಲಿ ಈ ಬಾಲಕರ ವಿರುದ್ಧ ಎಫ್ ಐ ಆರ್ ದಾಖಲಿಸಕೊಳ್ಳಲಾಗಿದೆ" ಎಂದು ಪೊಲೀಸರು ಹೇಳಿದ್ದಾರೆ.
ರಾಷ್ಟ್ರದಾದ್ಯಂತ ಪ್ರತಿ ಸಿನೆಮಾ ಪ್ರದರ್ಶನಕ್ಕೂ ಮುಂಚಿತವಾಗಿ ರಾಷ್ಟ್ರಗೀತೆ ಪ್ರದರ್ಶನ ಮತ್ತು ಪ್ರೇಕ್ಷಕರು ಅದಕ್ಕೆ ಎದ್ದು ನಿಂತು ಗೌರವ ಸಲ್ಲಿಸುವುದು ಕಡ್ಡಾಯ ಎಂದು ಅಪೆಕ್ಸ್ ನ್ಯಾಯಾಲಯ ಕಳೆದ ನವೆಂಬರ್ ನಲ್ಲಿ ಆದೇಶಿಸಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.