ಸುಬ್ರಮಣಿಯನ್ ಸ್ವಾಮಿ 
ಪ್ರಧಾನ ಸುದ್ದಿ

ರಾಜ್ಯಪಾಲರ ವಿರುದ್ಧ ಸುಪ್ರೀಂ ಮೆಟ್ಟಿಲೇರುವಂತೆ ಶಶಿಕಲಾಗೆ ಸುಬ್ರಮಣಿಯನ್ ಸ್ವಾಮಿ ಸಲಹೆ

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಅವರ ಬೆಂಬಲಕ್ಕೆ ನಿಂತಿರುವ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು,...

ಚೆನ್ನೈ: ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಅವರ ಬೆಂಬಲಕ್ಕೆ ನಿಂತಿರುವ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು, ರಾಜ್ಯಪಾಲ ಸಿ.ವಿದ್ಯಾಸಾಗರ್ ರಾವ್ ಅವರು ನಾಳೆ ನೂತನ ಸರ್ಕಾರ ರಚನೆಗೆ ಆಹ್ವಾನ ನೀಡದಿದ್ದರೆ ಅವರ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರುವಂತೆ ಭಾನುವಾರ ಸಲಹೆ ನೀಡಿದ್ದಾರೆ.
ನೂತನ ಮುಖ್ಯಮಂತ್ರಿಯ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ರಾಜ್ಯಪಾಲರು ನಾಳೆಯೊಳಗೆ ನಿರ್ಧರಿಸಬೇಕು. ಒಂದು ವೇಳೆ ನಿರ್ಧರಿಸದಿದ್ದರೆ ಕಲಂ 32ರಡಿ ಶಾಸಕರ ಕುದುರೆ ವ್ಯಾಪಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಅವರ ವಿರುದ್ಧ ಕೋರ್ಟ್ ಮೆಟ್ಟಿಲೇರಬಹದು ಎಂದು ಬಿಜೆಪಿ ನಾಯಕ ಟ್ವೀಟ್ ಮಾಡಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಹೆಸರನ್ನು ಅಕ್ರಮ ಆಸ್ತಿ ಪ್ರಕರಣದಿಂದ ತೆಗೆದುಹಾಕಬೇಕು ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಅದು ಕಾನೂನು ವಿಷಯವಾಗಿರುವುದರಿಂದ ಸುಪ್ರೀಂ ಕೋರ್ಟ್ ಪರಿಶೀಲನೆ ಮಾಡಬಹುದು ಎಂದಿದ್ದಾರೆ.
ನಿನ್ನೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಸಹ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪಕ್ಷ ಒಡೆಯುವ ಉದ್ದೇಶದಿಂದ ವಿಳಂಬ ತಂತ್ರ ಅನುಸರಿಸುತ್ತಿದ್ದಾರೆ ಎಂದು ಆಪಾದಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್