ಶಶಿಕಲಾ 
ಪ್ರಧಾನ ಸುದ್ದಿ

ಮಹಿಳೆ ರಾಜಕೀಯದಲ್ಲಿರುವುದು ತುಂಬಾ ಕಷ್ಟ: ಎಐಎಡಿಎಂಕೆ ಮುಖ್ಯಸ್ಥೆ ಶಶಿಕಲಾ

ಸರ್ಕಾರ ರಚಿಸಲು ಆಹ್ವಾನ ನೀಡಲು ವಿಳಂಬ ಮಾಡುತ್ತಿರುವ ತಮಿಳುನಾಡು ರಾಜ್ಯಪಾಲ ಸಿ.ವಿದ್ಯಾಸಾಗರ್ ರಾವ್ ಅವರ ಬಗ್ಗೆ ತೀವ್ರ ಬೇಸರ...

ಚೆನ್ನೈ: ಸರ್ಕಾರ ರಚಿಸಲು ಆಹ್ವಾನ ನೀಡಲು ವಿಳಂಬ ಮಾಡುತ್ತಿರುವ ತಮಿಳುನಾಡು ರಾಜ್ಯಪಾಲ ಸಿ.ವಿದ್ಯಾಸಾಗರ್ ರಾವ್ ಅವರ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಅವರು, ಮಹಿಳೆ ರಾಜಕೀಯದಲ್ಲಿರುವುದು ತುಂಬಾ ಕಷ್ಟ ಎಂದು ಹೇಳಿದ್ದಾರೆ.
ಇಂದು ತಮ್ಮ ಪೋಯಸ್ ಗಾರ್ಡನ್ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಶಶಿಕಲಾ, ತಮ್ಮ ಹೆಸರಿನಲ್ಲಿ ರಾಜ್ಯಪಾಲರಿಗೆ ವಿಳಾಸ ಮಾಡಿ ಬರೆದ ನಕಲಿ ಪತ್ರವೊಂದು ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿದೆ. ಮಹಿಳೆ ರಾಜಕೀಯದಲ್ಲಿರುವುದು ತುಂಬಾ ಕಷ್ಟ. ಜಯಲಲಿತಾ ಅವರ ಅವಧಿಯಲ್ಲಿ ನಾನು ಇದನ್ನು ನೋಡಿದ್ದೇನೆ. ಆದರೆ ಅವರು ಅದೆಲ್ಲವನ್ನೂ ಮೀರಿ ಬೆಳೆದಿದ್ದರು ಎಂದರು.
ಪಕ್ಷದ ಸಂಸ್ಥಾಪಕ ಎಂ.ಜಿ.ರಾಮಚಂದ್ರನ್ ಅವರ ನಿಧನದ ನಂತರ ಜಯಲಲಿತಾ ಅವರೂ ಇಂತಹದ್ದೆ ಕಠಿಣ ಪರಿಸ್ಥಿತಿಯನ್ನು ಎದುರಿಸಿದ್ದರು. ಆದರೆ ಜಯಲಿಲತಾ ಅವರು ಆ ಎಲ್ಲಾ ಪರಿಸ್ಥಿತಿಗಳನ್ನು ಚಾಕಚಕ್ಯತೆಯಿಂದ ಎದುರಿಸಿ ಕಳೆದ ವರ್ಷದ ನಡೆದ ವಿಧಾಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರು ಎಂದು ಶಶಿಕಲಾ ನೆನಪಿಸಿಕೊಂಡರು.
ಮೊದಲಿನಿಂದಲೂ ಬಾಹ್ಯ ಶಕ್ತಿಗಳು ಪಕ್ಷವನ್ನು ಒಡೆಯಲು ಯತ್ನಿಸುತ್ತಿವೆ. ಆದರೆ ಇದಕ್ಕೆ ನಾನು ಅವಕಾಶ ಕೊಡುವುದಿಲ್ಲ. ಪಕ್ಷದ ಶಾಸಕರು ನನ್ನೊಂದಿಗೆ ಇದ್ದಾರೆ. ಇಂದು ಸಹ ನಾನು ಅವರನ್ನು ಭೇಟಿ ಮಾಡಲು ಹೋಗುತ್ತಿದ್ದೇನೆ. ಕೂವತೂರ್ ರೆಸಾರ್ಟ್ ನಲ್ಲಿರುವ ಶಾಸಕರೊಂದಿಗೆ ನಾನು ನಿನ್ನೆಯೂ ಚರ್ಚಿಸಿದ್ದೇನೆ ಎಂದು ಶಶಿಕಲಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!

ನನ್ನ ಕನಸು ನೀವೇ ಸರ್‌; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ