ಜನಪ್ರಿಯ ತೆಲುಗು ನಟ ಮತ್ತು ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ 
ಪ್ರಧಾನ ಸುದ್ದಿ

ಎಎಪಿ ಜೊತೆಗೆ ಮೈತ್ರಿ ಸುಳಿವು ನೀಡಿದ ಪವನ್ ಕಲ್ಯಾಣ್

ಮಹತ್ವದ ಬೆಳವಣಿಗೆಯಲ್ಲಿ ಜನಪ್ರಿಯ ತೆಲುಗು ನಟ ಮತ್ತು ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಆಮ್ ಆದ್ಮಿ ಪಕ್ಷದ (ಎಎಪಿ) ಜೊತೆಗೆ ಮೈತ್ರಿ ಮಾಡಿಕೊಳ್ಳುವುದಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದಿದ್ದಾರೆ.

ಹೈದರಾಬಾದ್: ಮಹತ್ವದ ಬೆಳವಣಿಗೆಯಲ್ಲಿ ಜನಪ್ರಿಯ ತೆಲುಗು ನಟ ಮತ್ತು ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಆಮ್ ಆದ್ಮಿ ಪಕ್ಷದ (ಎಎಪಿ) ಜೊತೆಗೆ ಮೈತ್ರಿ ಮಾಡಿಕೊಳ್ಳುವುದಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದಿದ್ದಾರೆ. 
ಸದ್ಯಕ್ಕೆ ಅಮೆರಿಕಾ ಪ್ರವಾಸ ಮಾಡುತ್ತಿರುವ ಪವನ್, ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೀಡಿದ ಸಂದರ್ಶನದಲ್ಲಿ ಸಮಾನ ಮನಸ್ಕರು ಒಗ್ಗೂಡಬೇಕು ಎಂದಿದ್ದಾರೆ. 
"ಸಮಾನ ಮನಸ್ಕರು ಒಗ್ಗೂಡಬೇಕು ಎಂಬುದು ನನ್ನ ವೈಯಕ್ತಿಕ ಅಭಿಮತ" ಎಂದು ೨೧೦೯ರ ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಸ್ಪರ್ಧಿಸಲು ಯೋಜನೆ ರೂಪಿಸಿಕೊಂಡಿರುವ ನಟ-ರಾಜಕಾರಿಣಿ ಹೇಳಿದ್ದಾರೆ. 
೨೦೧೪ ರ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಜನ ಸೇನಾ ಪಕ್ಷವನ್ನು ಹುಟ್ಟುಹಾಕಿದ್ದ ಪವನ್ ಆಗ ಬಿಜೆಪಿ-ಟಿಡಿಪಿ ಮೈತ್ರಿಯ ಪರವಾಗಿ ಪ್ರಚಾರ ಮಾಡಿದ್ದರು. 
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ಕೇಂದ್ರ ನಿರಾಕರಿಸಿದ್ದರಿಂದ ಈ ಎರಡು ಪಕ್ಷಗಳ ವಿರುದ್ಧ ಪವನ್ ತಿರುಗಿಬಿದ್ದಿದ್ದರು. ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಲು ನಿರಾಕರಿಸಿದ ಬಿಜೆಪಿ ಪಕ್ಷದ ವಿರುದ್ಧ ಮತ್ತು ಅದಕ್ಕೆ ಒತ್ತಡ ಹಾಕದೆ ವಿಶೇಷ ಪರಿಹಾರವಷ್ಟೇ ಸ್ವೀಕರಿಸಿದ ಟಿಡಿಪಿ ಪಕ್ಷಗಳ ವಿರುದ್ಧ ಅವರು ಟೀಕಿಸುತ್ತಲೇ ಬಂದಿದ್ದಾರೆ. 
ಮೆಗಾಸ್ಟಾರ್ ಚಿರಂಜೀವಿ ಅವರ ಕಿರಿಯ ಸಹೋದರ ರಾಜಕೀಯದಲ್ಲಿ ಸಕ್ರಿಯರಾಗಲು ಸನ್ನದ್ಧರಾಗುತ್ತಿದ್ದಾರೆ. ಕಳೆದು ಕೆಲವು ತಿಂಗಳುಗಳಿಂದ ಸರಣಿ ಸಭೆಗಳನ್ನುದ್ದೇಶಿಸಿ ಮಾತನಾಡಿರುವ ಪವನ್, ದೇಶಪ್ರೇಮ, ಗೋಮಾಂಸ ನಿಷೇಧ, ನೋಟು ಹಿಂಪಡೆತ ನಿರ್ಧಾರ ಮತ್ತು ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧಕ ರೋಹಿತ್ ವೇಮುಲಾ ಆತ್ಮಹತ್ಯೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಬಿಜೆಪಿ ಪಕ್ಷದ ವಿರುದ್ಧ ತೀವ್ರವಾಗಿ ಹರಿಹಾಯ್ದಿದ್ದಾರೆ. 
೨೦೧೪ ರಲ್ಲಿ ನರೇಂದ್ರ ಮೋದಿ ಅವರಿಗೆ ಬೆಂಬಲಿಸಿದ್ದು ಏಕೆಂದರೆ ಅವರು ದೇಶದ ಜನತೆಗೆ ಸ್ಫೂರ್ತಿ ನೀಡುತ್ತಾರೆ ಎಂಬ ಭರವಸೆಯಿಂದ ಆದರೆ ಈಗ ನಡೆಯುತ್ತಿರುವ ಘಟನೆಗಳ ಬಗ್ಗೆ ಸ್ವಲ್ಪವೂ ಸಮಾಧಾನವಿಲ್ಲ ಎಂದು ಪವನ್ ಸಂದರ್ಶನದಲ್ಲಿ ಹೇಳಿದ್ದಾರೆ. 
ನೋಟು ಹಿಂಪಡೆತ ನಿರ್ಧಾರವನ್ನು ಟೀಕಿಸಿರುವ ಪವನ್ ಇದರಿಂದ ಜನ ತೊಂದರೆಗೊಳಗಾಗಿರುವುದನ್ನು ನೋಡಲು ದುಃಖವಾಗುತ್ತದೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT