ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಪರಪ್ಪನ ಅಗ್ರಹಾರದಿಂದ ಚೆನ್ನೈ ಜೈಲಿಗೆ ವರ್ಗಾಯಿಸಿ: ಜೈಲು ಅಧಿಕಾರಿಗಳಿಗೆ ಶಶಿಕಲಾ ಮನವಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ಎಐಎಡಿಎಂಕೆ ಪ್ರಧಾನ...

ಶಶಿಕಲಾ
Lingaraj Badiger
Updated On : 20 Feb 2017, 4:47 am
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿಕೆ ಶಶಿಕಲಾ ಅವರು ತಮ್ಮನ್ನು ಚೆನ್ನೈನ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸುವಂತೆ ಜೈಲು ಅಧಿಕಾರಿಗಳಿಗೆ ಸೋಮವಾರ ಮನವಿ ಮಾಡಿದ್ದಾರೆ.
ಫೆ.15ರಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಶಿಕಲಾ ಅವರು ಇಂದು ತಮ್ಮ ವಕೀಲರ ಜೊತೆ ಚರ್ಚಿಸಿ ತಮ್ಮನ್ನು ಚೆನ್ನೈನ ಜೈಲಿಗೆ ವರ್ಗಾಯಿಸುವಂತೆ ಕೋರಿ ಜೈಲು ಅಧಿಕಾರಿಗಳಿಗೆ ಮನವಿ ಸಲ್ಲಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಜೈಲು ಅಧಿಕಾರಿಗಳು ಶಶಿಕಲಾ ಮನವಿ ತಮ್ಮ ಕೈ ಸೇರಿದ್ದು, ಈ ಬಗ್ಗೆ ಚೆನ್ನೈನ ಜೈಲು ಅಧಿಕಾರಿಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.

Advertisement

Advertisement

ಶಶಿಕಲಾ ಪರಪ್ಪನ ಅಗ್ರಹಾರ ಜೈಲಿನಿಂದ ವರ್ಗಾವಣೆ ಆಗುವ ಬಗ್ಗೆ ಚೆನ್ನೈನ ಕೇಂದ್ರ ಕಾರಾಗೃಹದ ಅಧಿಕಾರಿಗಳು ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ವರದಿ ವಿವರಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments