ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ತಿರುಪತಿ ತಿಮ್ಮಪ್ಪನಿಗೆ ಬರೊಬ್ಬರಿ 5 ಕೋಟಿ ರುಪಾಯಿ ಮೌಲ್ಯದ ಚಿನ್ನದ ಆಭರಣಗಳನ್ನು ಕಾಣಿಕೆಯಾಗಿ ನೀಡುತ್ತಿದ್ದಾರೆ.
ತೆಲಂಗಾಣ ಮುಖ್ಯಮಂತ್ರಿಯಾದ ಬಳಿಕ ಇದೆ ಮೊದಲ ಬಾರಿಗೆ ಕುಟುಂಬ ಸಮೇತರಾಗಿ ನಾಳೆ ಬೆಳಗ್ಗೆ ತಿರುಮಲಕ್ಕೆ ತೆರಳುತ್ತಿರುವ ಚಂದ್ರಶೇಖರ್ ರಾವ್ ಅವರು, ಪ್ರತ್ಯೇಕ ರಾಜ್ಯ ನಿರ್ಮಾಣಕ್ಕೆ ಪ್ರತಿಫಲವಾಗಿ ತಿರುಪತಿ ತಿಮ್ಮಪ್ಪನಿಗೆ 5 ಕೋಟಿ ಮೌಲ್ಯದ ಚಿನ್ನದ ಆಭರಣ ಹಾಗೂ ಪದ್ಮಾವತಿ ದೇವಿಗೆ ಬೆಲೆಬಾಳುವ ಮೂಗಿನ ನತ್ತು ಕೂಡ ಕಾಣಿಕೆಯಾಗಿ ನೀಡಲಿದ್ದಾರೆ.
ಕೆಸಿಆರ್ ಅವರ ಮಂತ್ರಿಮಂಡಲದ ಸಚಿವರು ಸಹ ತಿರುಪತಿಗೆ ತೆರಳಲಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಚಂದ್ರಶೇಖರ್ ರಾವ್ ಅವರು ಪ್ರತ್ಯೇಕ ರಾಜ್ಯದ ಮುಖ್ಯಮಂತ್ರಿಯಾದ ನಂತರ ಧಾರ್ಮಿಕ ವಿಧಿ ವಿಧಾನಗಳಿಗೆ ಕೋಟಿಗಟ್ಟಲೇ ಹಣ ವ್ಯಯಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದಕ್ಕೂ ಮೊದಲು ವಾರಂಗಲ್‌ನಲ್ಲಿರುವ ಭದ್ರಕಾಳಿ ದೇವಿ ಮಂದಿರಕ್ಕೆ 11 ಕೆಜಿ ಚಿನ್ನದ ಕಿರೀಟ ಮತ್ತು 3 ಕೋಟಿ ರುಪಾಯಿ ವೆಚ್ಚದ ಧಾರ್ಮಿಕ ಕಾರ್ಯಕ್ರಮ ಆಯೋಜಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics