ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಯುಪಿಎಸ್ ಸಿ ಪರೀಕ್ಷೆ ಹಿಂದೂಡಿಕೆ, ಜೂನ್ 18ಕ್ಕೆ ಪರೀಕ್ಷೆ

ಐಎಎಸ್, ಐಪಿಎಸ್ ಹಾಗೂ ಇತರೆ ಹುದ್ದೆಗಳಿಗೆ ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್​ಸಿ) ನಡೆಸುವ 2017ನೇ ಸಾಲಿನ ಪ್ರಿಲಿಮನರಿ...

ನವದೆಹಲಿ: ಐಎಎಸ್, ಐಪಿಎಸ್ ಹಾಗೂ ಇತರೆ ಹುದ್ದೆಗಳಿಗೆ ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್​ಸಿ) ನಡೆಸುವ 2017ನೇ ಸಾಲಿನ ಪ್ರಿಲಿಮನರಿ ಪರೀಕ್ಷೆಯ ದಿನಾಂಕ ಹಿಂದೂಡಿಕೆಯಾಗಿದ್ದು, ಈ ಬಾರಿ ಜೂನ್ 18ರಂದು ಪರೀಕ್ಷೆಗಳು ನಡೆಯಲಿವೆ. 
ಯುಪಿಎಸ್ ಪ್ರತಿವರ್ಷ ಆಗಸ್ಟ್ ನಲ್ಲಿ ಪರೀಕ್ಷೆ ನಡೆಸುತ್ತಿತ್ತು. ಮೂರು ವರ್ಷಗಳ ನಂತರ ಈ ಬಾರಿ ಜೂನ್ ತಿಂಗಳ 2017ನೇ ಸಾಲಿನ ನಾಗರಿಕ ಸೇವೆಗಳ ಪ್ರಿಲಿಮನರಿ ಪರೀಕ್ಷೆ ನಡೆಸುವುದಾಗಿ ಅಧಿಸೂಚನೆ ಹೊರಡಿಸಿದೆ.
ಪರೀಕ್ಷೆಯ ಸಮಗ್ರ ಪ್ರಕ್ರಿಯೆಯನ್ನು ಸಕಾಲದಲ್ಲಿ ಪೂರ್ಣಗೊಳಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಯುಪಿಎಸ್ ಸಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಒಟ್ಟು 20 ವಿಭಾಗಗಳ 980 ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಸಲು ಮಾರ್ಚ್ 17 ಕೊನೆ ದಿನವಾಗಿದ್ದು ಪ್ರಿಲಿಮಿನರಿ ಪರೀಕ್ಷೆ ಜೂ.18ರಂದು ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT