ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

'ಕೈ'ಕಮಾಂಡ್‌ಗೆ ಕಪ್ಪ: ಮೌನಕ್ಕೆ ಶರಣಾದ ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಹೈಕಮಾಂಡ್ ಗೆ ನೂರಾರು ಕೋಟಿ ರುಪಾಯಿ ಕಪ್ಪ ಸಲ್ಲಿಕೆಯಾಗಿರುವ ಮಾಹಿತಿ ಇದೆ ಎನ್ನಲಾದ ಡೈರಿ ಬಹಿರಂಗಗೊಂಡ....

ಸಿದ್ದರಾಮಯ್ಯ
Lingaraj Badiger
Updated On : 24 Feb 2017, 6:40 am
ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಗೆ ನೂರಾರು ಕೋಟಿ ರುಪಾಯಿ ಕಪ್ಪ ಸಲ್ಲಿಕೆಯಾಗಿರುವ ಮಾಹಿತಿ ಇದೆ ಎನ್ನಲಾದ ಡೈರಿ ಬಹಿರಂಗಗೊಂಡ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮೌನಕ್ಕೆ ಶರಣಾಗಿದ್ದು, ಮಾಧ್ಯಮಗಳಿಂದ ತಪ್ಪಿಸಿಕೊಂಡು ಖಾಸಗಿ ಕಾರಿನಲ್ಲಿ ಅಜ್ಞಾತ ಸ್ಥಳಕ್ಕೆತೆರಳಿದ್ದಾರೆ.
ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಗೋವಿಂದರಾಜು ಅವರ ಡೈರಿಯಲ್ಲಿ ವಿವರ ಬಹಿರಂಗವಾಗುತ್ತಿದ್ದಂತೆ ಕಾಂಗ್ರೆಸ್ ಪಾಳೆಯದಲ್ಲಿ ತಲ್ಲಣ ಉಂಟು ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು ಇಂದು ತಮ್ಮ ನಿವಾಸದಲ್ಲಿಯೇ ಏಕಾಂಗಿಯಾಗಿದ್ದು, ಯಾರ ಭೇಟಿಗೂ ಅವಕಾಶ ಕೊಟ್ಟಿಲ್ಲ.
ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಇಂದು ಸಂಜೆ 7ಕ್ಕೆ ಸಿಎಂ ಮಲೆಮಹದೇಶ್ವರ ದೇಗುಲಕ್ಕೆ ಭೇಟಿ ನೀಡಬೇಕಾಗಿತ್ತು. ಆದರೆ ಡೈರಿ ವಿಚಾರದಲ್ಲಿ ಮಾಧ್ಯಮದವರ ಕಣ್ತಪ್ಪಿಸುವ ಉದ್ದೇಶದಿಂದ ಮಧ್ಯಾಹ್ನ 4 ಗಂಟೆಗೆ ದೇವಸ್ಥಾನಕ್ಕೆ ಭೇಟಿ ನೀಡಿ, ಕೇವಲ 15 ನಿಮಿಷದಲ್ಲೇ ದೇವರ ದರ್ಶನ ಪಡೆದು, ತರಾತರಿಯಲ್ಲಿ ಯಾರ ಕೈಗೂ ಸಿಗದೆ ಅಲ್ಲಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದರು.

Advertisement

Advertisement

ದೇಗುಲದಿಂದ ಬೆಂಗಳೂರಿನ ಕಾವೇರಿ ನಿವಾಸಕ್ಕೆ ಬಂದ ಬಳಿಕ ಖಾಸಗಿ ಕಾರಿನಲ್ಲಿ ಯಾವುದೇ ಬೆಂಗಾವಲು ಪಡೆ ಇಲ್ಲದೆ ಅಜ್ಞಾತ ಸ್ಥಳಕ್ಕೆ ತೆರಳಿರುವುದಾಗಿ ಮಾಧ್ಯಮಗಳು ವರದಿ ಮಾಡಿದ್ದು, ಡೈರಿ ಪ್ರಕರಣದಿಂದ ಹೊರ ಬರುವ ಬಗ್ಗೆ ತಮ್ಮ ಆಪ್ತರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement