ಶಿವ ಪ್ರತಿಮೆ ಅನಾವರಣಗೊಳಿಸುತ್ತಿರುವ ಪ್ರಧಾನಿ ಮೋದಿ
ಕೊಯಂಬತ್ತೂರು: ದೇಶಾದ್ಯಂತ ಶುಕ್ರವಾರ ಸಡಗರ ಸಂಭ್ರಮದಿಂದ ಮಹಾಶಿವರಾತ್ರಿ ಆಚರಿಸಲಾಗುತ್ತಿದ್ದು, ಕೊಯಂಬತ್ತೂರಿನಲ್ಲಿ ಇಶಾ ಫೌಂಡೇಷನ್ ನಿರ್ಮಿಸಿರುವ ವಿಶ್ವದ ಅತಿ ಎತ್ತರದ ಶಿವನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶಿವರಾತ್ರಿಯಂದೆ ಅನಾವರಣಗೊಳಿಸಿದ್ದಾರೆ.
ಇಂದು ಸಂಜೆ 6.30ರ ಸುಮಾರಿಗೆ ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಷನ್ ನಿರ್ಮಿಸಿರುವ ಧ್ಯಾನ ಭಂಗಿಯಲ್ಲಿ ಕುಳಿತಿರುವ 112 ಅಡಿ ಎತ್ತರದ ಪರಶಿವನ ಪ್ರತಿಮೆಯನ್ನು ಪ್ರಧಾನಿ ಲೋಕಾರ್ಪಣೆಗೊಳಿಸಿದರು.
ಪ್ರತಿಮೆ ಉದ್ಘಾಟಿಸಿದ ಬಳಿಕ ಪ್ರಧಾನಿ ಮೋದಿ ಅವರು ವಿಶ್ವಾದ್ಯಂತ ನಡೆಯಲಿರುವ ’ಮಹಾ ಯೋಗ ಯಜ್ಞಕ್ಕೆ ಅಗ್ನಿಯನ್ನು ಪ್ರತಿಷ್ಠಾಪಿಸಲಿದ್ದಾರೆ. ಮುಂದಿನ ವರ್ಷದ ವೇಳೆಗೆ 100 ಜನರಿಗೆ ಸರಳ ಯೋಗವನ್ನು ಕಲಿಸಿಕೊಡುವುದಾಗಿ ಕನಿಷ್ಠ 1 ಮಿಲಿಯನ್ ಜನರು ಪ್ರತಿಜ್ಞೆ ಕೈಗೊಳ್ಳುವುದು ಮಹಾ ಯೋಗ ಯಜ್ಞದ ಮುಖ್ಯ ಉದ್ದೇಶವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಆಗಮನದ ಹಿನ್ನೆಲೆಯಲ್ಲಿ ತಮಿಳುನಾಡು, ಕೇರಳ ಗಡಿಭಾಗ ಹಾಗೂ ಕೊಯಂಬತ್ತೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics