ಪಲ್ಸರ್ ಸುನಿ 
ಪ್ರಧಾನ ಸುದ್ದಿ

ನಟಿ ಮೇಲೆ ಲೈಂಗಿಕ ದೌರ್ಜನ್ಯ: ಪ್ರಮುಖ ಆರೋಪಿ ಪಲ್ಸರ್ ಸುನಿ 10 ದಿನ ಪೊಲೀಸ್ ವಶಕ್ಕೆ

ದಕ್ಷಿಣ ಭಾರತದ ಖ್ಯಾತ ನಟಿಯ ಅಪಹರಣ ಹಾಗೂ ಲೈಂಗಿಕ ದೌರ್ನಜ್ಯ ಪ್ರಕರಣದ ಪ್ರಮುಖ ಆರೋಪಿ ಸುನಿಲ್ ಕುಮಾರ್ ಅಲಿಯಾಸ್ ಪಲ್ಸರ್....

ಕೊಚ್ಚಿ: ದಕ್ಷಿಣ ಭಾರತದ ಖ್ಯಾತ ನಟಿಯ ಅಪಹರಣ ಹಾಗೂ ಲೈಂಗಿಕ ದೌರ್ನಜ್ಯ ಪ್ರಕರಣದ ಪ್ರಮುಖ ಆರೋಪಿ ಸುನಿಲ್ ಕುಮಾರ್ ಅಲಿಯಾಸ್ ಪಲ್ಸರ್ ಸುನಿಯನ್ನು ಕೋರ್ಟ್ ಶನಿವಾರ ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.
ಕಳೆದ ಗುರುವಾರ ಪಲ್ಸರ್ ಸುನಿಯನ್ನು ಬಂಧಿಸಿದ್ದ ಕೇರಳ ಪೊಲೀಸರು ಇಂದು ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಮಾರ್ಚ್ 5ರವೆಗೆ ತಮ್ಮ ವಶಕ್ಕೆ ಪಡೆದಿದ್ದಾರೆ.
ಆರೋಪಿ ವಿಡಿಯೋ ಮಾಡಲು ಬಳಸಿದ ಮೊಬೈಲ್ ಹಾಗೂ ಮೆಮೊರಿ ಕಾರ್ಡ್ ವಶಕ್ಕೆ ಪಡೆಯಲು ಹಾಗೂ ಪ್ರಕರಣದ ಹಿಂದೆ ಯಾರ ಪಿತೂರಿ ಇದೆ ಎಂಬುದುರ ಬಗ್ಗೆ ತನಿಖೆ ನಡೆಸಲು ಆರೋಪಿಯನ್ನು ತಮ್ಮ ವಶಕ್ಕೆ ನೀಡಬೇಕು ಎಂದು ಪೊಲೀಸರು ಕೋರ್ಟ್ ಮನವಿ ಮಾಡಿದ್ದರು. ಪೊಲೀಸರ ಮನವಿಯನ್ನು ಕೋರ್ಟ್ ಪುರಸ್ಕರಿಸಿದೆ.
ಕಳೆದ ಶುಕ್ರವಾರ ರಾತ್ರಿ 7.30 ರ ಸುಮಾರಿಗೆ ತ್ರಿಶೂರ್​ನಿಂದ ಎರ್ನಾಕುಲಂಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ನಟಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಲಾಗಿತ್ತು. ನಂತರ ರಾತ್ರಿ ಪರಿವಟ್ಟಲಂ ಎಂಬಲ್ಲಿ ನಟಿಯನ್ನು ಕಾರಿನಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದರು. ನಂತರ ನಟಿ ನಿರ್ದೇಶಕರೊಬ್ಬರ ಮನೆಗೆ ತೆರಳಿ ಅಲ್ಲಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣ ಸಂಬಂಧ ಸುನಿಲ್ ಸೇರಿದಂತೆ ಇನ್ನಿತರೆ ಆರೋಪಿಗಳ ವಿರುದ್ಧ ಕೇರಳ ಪೊಲೀಸರು ಐಪಿಸಿ ಸೆಕ್ಸನ್ 342 (ಅಕ್ರಮ ಬಂಧನ), 366 (ಅಪಹರಣ ಅಥವಾ ಮಹಿಳೆಯ ಅಪಹರಣ), 376 (ಅತ್ಯಾಚಾರ, 506 (1) ಮತ್ತು 120 (ಬಿ) (ವಂಚನೆ)) ಅಡಿ ಕೇಸ್ ದಾಖಲಿಸಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೋಗಿದ್ದ ಟೆಕ್ಕಿ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿ ಶಾಂತಲಾ ಡ್ರಾಪ್‌ ಪಾಯಿಂಟ್‌ ಸರ್ಚ್‌; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'ಬಸವಣ್ಣನನ್ನೇ ಬಿಡಲಿಲ್ಲ.. ನಾನ್ಯಾರು..'; ‘ಅವರಿಗೆ ಸಚಿವ ಸ್ಥಾನ ಸಿಗದಿರಲು ನಾನು ಕಾರಣ ಅಲ್ಲ’ ಎಂದ ಎಂಬಿ ಪಾಟೀಲ್ ಸ್ಪಷ್ಟನೆ, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!