ಟಿ.ಬಿ.ಜಯಚಂದ್ರ 
ಪ್ರಧಾನ ಸುದ್ದಿ

2011ರ ಕೆಪಿಎಸ್‌ಸಿ ನೇಮಕಾತಿಗೆ ಸಚಿವ ಸಂಪುಟ ಒಪ್ಪಿಗೆ, ಕೆಎಟಿ ತೀರ್ಪು ಪ್ರಶ್ನಿಸದಿರಲು ಸರ್ಕಾರ ನಿರ್ಧಾರ

ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್)ದ 2011ನೇ ಬ್ಯಾಚ್​ನ 362 ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳಿಗೆ ನಡೆಸಿದ್ದ ನೇಮಕಾತಿ....

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್)ದ 2011ನೇ ಬ್ಯಾಚ್​ನ 362 ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳಿಗೆ ನಡೆಸಿದ್ದ ನೇಮಕಾತಿಯನ್ನು ಸಚಿವ ಸಂಪುಟ ಒಪ್ಪಿಕೊಂಡಿದ್ದು, ಕೆಎಟಿ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸದಿರಲು ರಾಜ್ಯ ಸರ್ಕಾರ ನಿರ್ಧಾರಸಿದೆ. 
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಅವರು, ಕೆಎಟಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸದಿರಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿರುವುದಾಗಿ ತಿಳಿಸಿದರು.
ಇದೇ ವೇಳೆ ಸರ್ಕಾರ ಯೂಟರ್ನ್ ಹೊಡೆದಿಲ್ಲ. ಪ್ರಜ್ಞಾಪೂರ್ವಕ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು 2011ರ ಕೆಪಿಎಸ್ ಸಿ ನೇಮಕಾತಿ ಅಧಿಸೂಚನೆಯನ್ನೇ ರದ್ದುಗೊಳಿಸಿದ್ದ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.
2011ರ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ವೇಳೆ ಅಕ್ರಮ ನಡೆದಿದೆ ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ತಾನು ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಗೊಳಿಸಿತ್ತು. ಸರ್ಕಾರದ ಆದೇಶದ ವಿರುದ್ಧ ಕೆಲ ಅಭ್ಯರ್ಥಿಗಳು ಕೆಎಟಿ ಮೊರೆ ಹೋಗಿದ್ದರು. ಕೆಎಟಿ ಸರ್ಕಾರದ ಆದೇಶವನ್ನು ರದ್ದುಗೊಳಿಸಿದೆ.
2011ನೇ ಸಾಲಿನ  ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ  ಕರ್ನಾಟಕ ಆಡಳಿತ ನ್ಯಾಯ ಮಂಡಳಿ (ಕೆಎಟಿ) ಅ. 19 ನೀಡಿರುವ ಆದೇಶದ ವಿರುದ್ಧ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು  ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್‌) ಸರ್ಕಾರಕ್ಕೆ ಶಿಫಾರಸು ಮಾಡಿದೆ ಎನ್ನಲಾಗಿತ್ತು. ಆದರೆ ಇದೀಗ ಮೇಲ್ಮನವಿ ಸಲ್ಲಿಸದಿರಲು ಸರ್ಕಾರ ನಿರ್ಧರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್