ಸಂಗ್ರಹ ಚಿತ್ರ 
ಪ್ರಧಾನ ಸುದ್ದಿ

ಕಾನೂನಿಗಿಂತ ಯಾರೂ ದೊಡ್ಡವರಲ್ಲ, ಇದು ಕ್ರಿಕೆಟ್ ಗೆ ಸಂದ ಜಯ: ನ್ಯಾ. ಲೋಧಾ

ಬಿಸಿಸಿಐ ಮತ್ತು ಲೋಧಾ ಸಮಿತಿ ನಡುವಿನ ಹೋರಾಟದಲ್ಲಿ ಕ್ರಿಕೆಟ್ ಜಯ ಸಂದಿದೆ ಎಂದು ನ್ಯಾಯಮೂರ್ತಿ ಲೋಧಾ ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ: ಬಿಸಿಸಿಐ ಮತ್ತು ಲೋಧಾ ಸಮಿತಿ ನಡುವಿನ ಹೋರಾಟದಲ್ಲಿ ಕ್ರಿಕೆಟ್ ಜಯ ಸಂದಿದೆ ಎಂದು ನ್ಯಾಯಮೂರ್ತಿ ಲೋಧಾ ಅಭಿಪ್ರಾಯಪಟ್ಟಿದ್ದಾರೆ.

ಅತ್ತ ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠ ಲೋಧಾ ಸಮಿತಿ ಶಿಫಾರಸ್ಸನ್ನು ಜಾರಿಗೊಳಿಸದ ಹಿನ್ನಲೆಯಲ್ಲಿ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಹಾಗೂ ಬಿಸಿಸಿಐ ಕಾರ್ಯದರ್ಶಿ ಅಜಯ್ ಶಿರ್ಕೆ ಅವರನ್ನು  ವಜಾಗೊಳಿಸುತ್ತಿದ್ದಂತೆಯೇ ಇತ್ತ ಸಮಿತಿ ಅಧ್ಯಕ್ಷ  ಲೋಧಾ ಅವರು ತಮ್ಮ ಸಂತಸ ವ್ಯಕ್ತಪಡಿಸಿದ್ದಾರೆ. ದೇಶದ ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಆಡಳಿತಗಾರರು ಇಂದು ಇರುತ್ತಾರೆ, ನಾಳೆ ಹೋಗುತ್ತಾರೆ, ಆದರೆ ಕ್ರೀಡೆ  ಶಾಶ್ವತ, ಇದು ಕ್ರೀಡೆಗೆ ಸಂದ ಜಯ ಎಂದು ತಮ್ಮ ಸಂತಸ ಹಂಚಿಕೊಂಡಿದ್ದಾರೆ.

ಅಲ್ಲದೆ ಸುಪ್ರೀ ಕೋರ್ಚ್ ಇದೇ ರೀತಿಯ ನಿಲುವನ್ನು ಇತರೆ ಕ್ರೀಡೆಗಳ ಮೇಲೂ ತೋರಬೇಕು ಎಂದು ಲೋಧಾ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ