ಜಿ.ಪರಮೇಶ್ವರ 
ಪ್ರಧಾನ ಸುದ್ದಿ

ಹೊಸ ವರ್ಷಾಚರಣೆ ವೇಳೆ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ 'ಪಾಶ್ಚಿಮಾತ್ಯ' ಕಾರಣ: ಪರಮೇಶ್ವರ

ನಗರದ ಪ್ರತಿಷ್ಠಿತ ಎಂಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಶನಿವಾರ ಹೊಸ ವರ್ಷಾಚರಣೆ ವೇಳೆ ಯುವತಿಯರ ಮೇಲೆ ನಡೆದ ಲೈಂಗಿಕ ದೌರ್ಜನಕ್ಕೆ...

ಬೆಂಗಳೂರು: ನಗರದ ಪ್ರತಿಷ್ಠಿತ ಎಂಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಶನಿವಾರ ಹೊಸ ವರ್ಷಾಚರಣೆ ವೇಳೆ ಯುವತಿಯರ ಮೇಲೆ ನಡೆದ ಲೈಂಗಿಕ ದೌರ್ಜನಕ್ಕೆ ಪಾಶ್ಚಿಮಾತ್ಯ ಸಂಸ್ಕೃತಿ ಅನುಕರಣೆಯೇ ಕಾರಣ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸೋಮವಾರ ವಿವಾದಾತ್ಮ ಹೇಳಿಕೆ ನೀಡಿದ್ದಾರೆ
ಹೊಸ ವರ್ಷದಂದು ಯುವತಿಯರ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಸಿದ ಗೃಹ ಸಚಿವರು, ಹೊಸ ವರ್ಷಾಚರಣೆ ದಿನ ಭದ್ರತೆಗಾಗಿ ನೂರಾರು ಪೊಲೀಸರು ಹಾಗೂ 25ಕ್ಕೂ ಹೆಚ್ಚು ಸಿಸಿಟಿವಿಗಳನ್ನು ಅಳವಡಿಸಲಾಗಿದ್ದರೂ ಇಂತಹ ಘಟನೆ ಘಟಿಸಿದ್ದು ದುರದೃಷ್ಟಕರ ಎಂದಿದ್ದಾರೆ. 
ನಾವು ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರೂ ಹೊಸ ವರ್ಷ ಮತ್ತು ಕ್ರಿಸ್ ಮಸ್ ಸಂದರ್ಭದಲ್ಲಿ ಇಂತಹ ಘಟನೆಗಳು ಘಟಿಸಿತ್ತವೆ. ಇದಕ್ಕೆ ಪಾಶ್ಚಿಮಾತ್ಯ ಸಂಸ್ಕೃತಿ ಅನುಕರಣೆಯೇ ಕಾರಣ ಎಂದು ಹೇಳಿದ್ದಾರೆ.
ಇನ್ನು ಗೃಹ ಸಚಿವ ಹೇಳಿಕೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಲಲಿತಾ ಕುಮಾರಮಂಗಲಂ ಅವರು, ಪರಮೇಶ್ವರ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ ಈ ಸಂಬಂಧ ಪೊಲೀಸರನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಕುಮಾರಮಂಗಲಂ ಅವರು, ಘಟನೆಗೆ ಸಂಬಂಧಿಸಿದಂತೆ ವರದಿ ನೀಡುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.
ಹೊಸ ವರ್ಷಾಚರಣೆ ವೇಳೆಯಲ್ಲಿ ನಗರದ ಮಹಾತ್ಮ ಗಾಂಧಿ ರಸ್ತೆಯಲ್ಲಿ ಯುವಕರ ಗುಂಪಿನಿಂದ ಕೆಲವು ಮಹಿಳೆಯರ ಮಾನಭಂಗ ನಡೆಯಿತು. ಅಳುತ್ತಿದ್ದ ಈ ಮಹಿಳೆಯರು ಮಹಿಳಾ ಪೊಲೀಸರತ್ತ ಧಾವಿಸಿ ದೂರು ನೀಡಿದ್ದು ಕಂಡು ಬಂತು ಎಂದು ಪತ್ರಿಕೆಯೊಂದು ಕೆಲವು ಮಹಿಳೆಯರು ಪೊಲೀಸರು ದೂರು ನೀಡುತ್ತಿದ್ದ ಫೊಟೋ ಸಹಿತವಾಗಿ ವರದಿ ಮಾಡಿತ್ತು.
ಹೊಸ ವರ್ಷದ ಉದಯ ಹತ್ತಿರವಾಗುತ್ತಿದ್ದಂತೆ ಎಲ್ಲೆಲ್ಲಿಂದಲೋ ಕಾರು, ಬೈಕ್‌ಗಳಲ್ಲಿ ಬಂದ ಪಡ್ಡೆ ಹು‌ಡುಗರ ದಂಡು ಪುಂ‌ಡಾಟಕ್ಕೆ ಶುರುವಿಟ್ಟುಕೊಂಡಿತು. ಯುವತಿಯರು ಕಾಣುತ್ತಲೇ ಹೊಲಸು ಭಾಷೆಯಲ್ಲಿ ಕೇಕೆ ಹಾಕುವುದು, ಗುಂಪು ಗುಂಪಾಗಿ ಅವರತ್ತ ನುಗ್ಗಿ ಹಿಡಿದು ಎಳೆದಾಡುವುದು, ಎಲ್ಲೆಂದರಲ್ಲಿಗೆ ಕೈ ಹಾಕುತ್ತಿದ್ದರು ಎಂದು ವರದಿ ಮಾಡಲಾಗಿದೆ. ಈ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲು ನಿರ್ಧರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಭೀಕರ ಅಪಘಾತ: ಯೂಟರ್ನ್‌ ವೇಳೆ ಗೂಡ್ಸ್ ವಾಹನ ಪಲ್ಟಿ, ಕಬ್ಬಿಣದ ಸರಳು ಬಿದ್ದು ಬೈಕ್ ಸವಾರ ದಾರುಣ ಸಾವು, Video

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್