ಸಂಗ್ರಹ ಚಿತ್ರ 
ಪ್ರಧಾನ ಸುದ್ದಿ

ಸಕಲ ಸರ್ಕಾರಿ ಗೌರವಗಳೊಂದಿಗೆ ನಾಳೆ ಮಹದೇವ ಪ್ರಸಾದ್ ಅಂತ್ಯಕ್ರಿಯೆ

ಮಂಗಳವಾರ ನಿಧನರಾದ ಸಹಕಾರಿ ಮತ್ತು ಸಕ್ಕರೆ ಸಚಿವ ಮಹದೇವ ಪ್ರಸಾದ್ ಅವರ ಅಂತ್ಯಕ್ರಿಯೆಯನ್ನು ಅವರ ಹುಟ್ಟೂರಾದ ಹಾಲಳ್ಳಿಯಲ್ಲಿ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬೆಂಗಳೂರು: ಮಂಗಳವಾರ ನಿಧನರಾದ ಸಹಕಾರಿ ಮತ್ತು ಸಕ್ಕರೆ ಸಚಿವ ಮಹದೇವ ಪ್ರಸಾದ್ ಅವರ ಅಂತ್ಯಕ್ರಿಯೆಯನ್ನು ಅವರ ಹುಟ್ಟೂರಾದ ಹಾಲಳ್ಳಿಯಲ್ಲಿ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮಹದೇವ ಪ್ರಸಾದ್ ಅವರ ಪುತ್ರರಾದ ಗಣೇಶ್ ಪ್ರಸಾದ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಸಾದ್ ಅವರ ಪಾರ್ಥೀವ ಶರೀರ ಈಗಾಗಲೇ ವಿಶೇಷ ಆ್ಯಂಬುಲೆನ್ಸ್ ವಾಹನದಲ್ಲಿ ಚಿಕ್ಕಮಗಳೂರಿನಿಂದ ಮೈಸೂರಿನತ್ತ  ಆಗಮಿಸುತ್ತಿದೆ. ಮಧ್ಯಾಹ್ನ ಸುಮಾರು 3 ಗಂಟೆ ಸುಮಾರಿನಲ್ಲಿ ಮೃತದೇಹ ಮೈಸೂರಿಗೆ ಆಗಮಿಸಲಿದ್ದು, 3 ಗಂಟೆ ಬಳಿಕ ಮಹದೇವ ಪ್ರಸಾದ್ ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಬಳಿಕ ರಾತ್ರಿ  ಸುಮಾರು 11.30ರ ಸುಮಾರಿನಲ್ಲಿ ಮೃತದೇಹವನ್ನು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಾಲಳ್ಳಿಗೆ ಕೊಂಡೊಯ್ಯಲಾಗುತ್ತದೆ.

ಅಲ್ಲಿನ ದೇವರಾಜ ಅರಸು ಕ್ರೀಡಾಂಗಣದಲ್ಲಿ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕೆ ಇಟ್ಟು ಬಳಿಕ ಮಧ್ಯಾಹ್ನದ ವೇಳೆ ವೀರಶೈವ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಮಹದೇವ ಪ್ರಸಾದ್ ಅವರ ಪುತ್ರ ಗಣೇಶ್ ಪ್ರಸಾದ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT