ಸಂಗ್ರಹ ಚಿತ್ರ 
ಪ್ರಧಾನ ಸುದ್ದಿ

ಭಾರತ ಯುದ್ಧಕ್ಕೆ ಸಿದ್ಧವಾಗಿದೆ; ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆದರೆ ಅಚ್ಚರಿ ಇಲ್ಲ: ಸೇನಾ ಮುಖ್ಯಸ್ಥ ಬಿಪಿನ್ ರಾವತ್

ಭಾರತ ಯುದ್ಧಕ್ಕೆ ಸಿದ್ಧವಾಗುತ್ತಿದ್ದು, ಗಡಿಯಲ್ಲಿ ಮಿತಿ ಮೀರಿ ವರ್ತಿಸುತ್ತಿಕುವ ಪಾಕಿಸ್ತಾನದ ವಿರುದ್ಧ ಮತ್ತೊಂದು ಸೀಮಿತ ದಾಳಿ ನಡೆಸಿದರೆ ಅಚ್ಚರಿ ಏನಿಲ್ಲ ಎಂದು ನೂತನ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಹೇಳಿದ್ದಾರೆ.

ನವದೆಹಲಿ: ಭಾರತ ಯುದ್ಧಕ್ಕೆ ಸಿದ್ಧವಾಗುತ್ತಿದ್ದು, ಗಡಿಯಲ್ಲಿ ಮಿತಿ ಮೀರಿ ವರ್ತಿಸುತ್ತಿಕುವ ಪಾಕಿಸ್ತಾನದ ವಿರುದ್ಧ ಮತ್ತೊಂದು ಸೀಮಿತ ದಾಳಿ ನಡೆಸಿದರೆ ಅಚ್ಚರಿ ಏನಿಲ್ಲ ಎಂದು ನೂತನ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು  ಹೇಳಿದ್ದಾರೆ.

ಇತ್ತೀಚೆಗಷ್ಟೇ ಭಾರತೀಯ ಸೇನೆಯ ಮುಖ್ಯಸ್ಥರಾಗಿ ಆಯ್ಕೆಗೊಂಡ ಬಿಪಿನ್ ರಾವತ್  ಇತ್ತೀಚೆಗಷ್ಟೇ ಗಡಿಯಲ್ಲಿ ಶಾಂತಿ ಸ್ಥಾಪನೆಗೆ ಭಾರತ ಸದಾ ಮುಂದಿರುತ್ತದೆ. ಆದರೆ ಅದು ಸಾಧ್ಯವಾಗುವುದಿಲ್ಲ ಎಂದಾದರೇ ಭುಜ ಸಡಿಲಿಸಿ  ತೋಳ್ಬಲ ಪ್ರದರ್ಶನಕ್ಕೆ ಭಾರತ ಹಿಂಜರಿಯುವುದಿಲ್ಲ ಎಂದು ಹೇಳಿದ್ದರು. ಈ ಹೇಳಿಕೆ ವ್ಯಾಪಕ ಚರ್ಚೆಗೆ ಕಾರಣವಾಗಿರುವಂತೆಯೇ ಬಿಪಿನ್ ರಾವತ್ ಮತ್ತೊಂದು ಅಚ್ಚರಿ ಹೇಳಿಕೆ ನೀಡಿ ಇದೀಗ ಮತ್ತೆ ಚರ್ಚೆಗೆ ಕಾರಣವಾಗಿದ್ದಾರೆ.

ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಬಿಪಿನ್ ರಾವತ್ ಅವರು, ಭಾರತ ಯುದ್ಧಕ್ಕೆ ಸಿದ್ಧವಾಗುತ್ತಿದ್ದು, ಪಾಕಿಸ್ತಾನ ವಿರುದ್ಧ ಮತ್ತೊಂದು ಸೀಮಿತ ದಾಳಿ ನಡೆದರೂ ಅಚ್ಚರಿ ಇಲ್ಲ ಎಂದು ಹೇಳುವ ಮೂಲಕ ರಕ್ಷಣಾ ತಜ್ಞರ  ಹುಬ್ಬೇರಿಸಿದ್ದಾರೆ.  ಅಂತೆಯೇ ಭಾರತೀಯ ಸೇನೆಯ ಕಾರ್ಯಾಚರಣೆ ವಿಧಾನವನ್ನು ಆಧುನೀಕರಣಗೊಳಿಸುವ ಅಗತ್ಯವಿದೆ. ಹೀಗಾಗಿ ಶಸ್ತ್ರಾಸ್ತ್ರಾ ಗೋದಾಮು, ಫಿರಂಗಿಗಳನ್ನು ಆಧುನೀಕರಣಗೊಳಿಸಬೇಕಿದೆ. ಅಂತೆಯೇ ನಮ್ಮ  ವಾಯು ಸೇನೆಯನ್ನು ಮತ್ತಷ್ಟು ಬಲಪಡಿಸಬೇಕಿದ್ದು, ಅತ್ಯಾಧುನಿಕ  ಹೆಲಿಕಾಪ್ಟರ್ ಗಳ ಅಗತ್ಯವಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಒರ್ ಒಪಿ ಬಗ್ಗೆ ಮಾತನಾಡಿದ ಬಿಪಿನ್ ರಾವತ್ ಅವರು, ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ಭರವಸೆ ಈಡೇರಿಸಲಾಗಿದೆ. ಜಂತರ್ ಮಂತರ್ ನಲ್ಲಿ ಕುಳಿತಿರುವ ಹಿರಿಯ ಮಾಜಿ ಸೇನಾಧಿಕಾರಿಗಳು ಯಾವುದೇ  ಆತಂಕಕ್ಕೀಡಾಗದೇ ಮನೆಗೆ ತೆರಳಬಹುದು. ಕೇಂದ್ರ ಸರ್ಕಾರ ಭರವಸೆ ಈಡೇರಿಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಯುದ್ಧಕ್ಕೆ ನಾವು ಸಾದ ಸಿದ್ಧ!
ಇನ್ನು ಯುದ್ಧದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿದ ಬಿಪಿನ್ ರಾವತ್ ಅವರು, ಯುದ್ಧಕ್ಕೆ ನಾವು ಸದಾ ಸಿದ್ಧ. ಅದೇ ನಮ್ಮ ಕರ್ತವ್ಯ. ಶತ್ರುಪಾಳಯದ ಸೈನಿಕರು ಯಾವ  ಕ್ಷಣದಲ್ಲಾದರೂ ದಾಳಿ ಮಾಡಬಹುದು. ಇದಕ್ಕಾಗಿ ನಾವು ಸಿದ್ಧರಿರುತ್ತೇವೆ. ಆದರೆ ಯುದ್ಧದಂತಹ ಘಟನೆಗಳಿಂದಾಗಿ ಗಡಿಯಲ್ಲಿನ ನಾಗರಿಕರ ಆಸ್ತಿಪಾಸ್ತಿಗೆ ಧಕ್ಕೆಯಾಗುತ್ತದೆ ಎಂದು ರಾವತ್ ಅಭಿಪ್ರಾಯಪಟ್ಟಿದ್ದಾರೆ.

ಕಳೆದ ಶನಿವಾರವಷ್ಟೇ ಬಿಪಿನ್ ರಾವತ್ ಅವರು ಭಾರತೀಯ ಸೇನೆ 27ನೇ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ್ದರು. ಸೇವಾ ಹಿರಿತನವನ್ನು ಬದಿಗೊತ್ತಿ ಕೇಂದ್ರ ಸರ್ಕಾರ ಬಿಪಿನ್ ರಾವತ್ ಅವರನ್ನು ಸೇನಾ ಮುಖ್ಯಸ್ಥರನ್ನು ಆಯ್ಕೆ  ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ಈ ರಾತ್ರಿ ನನ್ನ ಜೊತೆ ಮಲಗು: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ನಿತಿ ಟೇಲರ್!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!