ಸಂಗ್ರಹ ಚಿತ್ರ 
ಪ್ರಧಾನ ಸುದ್ದಿ

ಖ್ಯಾತ ಬಾಲಿವುಡ್ ನಟ ಓಂಪುರಿ ಇನ್ನಿಲ್ಲ

ಬಾಲಿವುಡ್ ನ ಖ್ಯಾತ ನಟ ಓಂಪುರಿ ಅವರು (66 ವರ್ಷ) ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ.

ಮುಂಬೈ: ಬಾಲಿವುಡ್ ನ ಖ್ಯಾತ ನಟ ಓಂಪುರಿ ಅವರು (66 ವರ್ಷ) ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ.

ಮುಂಬೈನ ಅಂಧೇರಿಯಲ್ಲಿರುವ ನಟ ಓಂಪುರಿ ಅವರ ಸ್ವಗೃಹದಲ್ಲಿ ಶುಕ್ರವಾರ ಬೆಳಗ್ಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬುದ ಮೂಲಗಳು ತಿಳಿಸಿವೆ. ಖ್ಯಾತ ಚಿತ್ರ ನಿರ್ದೇಶಕ/ನಿರ್ಮಾಪಕ ಅಶೋಕ್ ಪಂಡಿತ್ ಅವರು ಓಂಪುರಿ ನಿಧನ ಸುದ್ದಿಯನ್ನು ಸ್ಪಷ್ಟಪಡಿಸಿದ್ದು, ಮನೆಯಲ್ಲೇ ಅವರು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ಓಂಪುರಿ ಅವರು 1950 ಅಕ್ಟೋಬರ್ 18ರಂದು ಹರ್ಯಾಣದ ಅಂಬಾಲದಲ್ಲಿ ಜನಿಸಿದ್ದರು. 1976ರಲ್ಲಿ ಮರಾಠಿ ಚಿತ್ರ ಘಾಶಿರಾಮ್ ಕೋತ್ವಾಲ್ ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಕನ್ನಡ, ಹಿಂದಿ, ಇಂಗ್ಲೀಷ್, ಫ್ರೆಂಚ್ ಸೇರಿದಂತೆ ಸುಮಾರು 7ಕ್ಕೂ ಅಧಿಕ ಭಾಷೆಗಳಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ಕನ್ನಡದ ತಬ್ಬಲಿ ನೀನಾದೆ ಮಗನೇ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದ ಓಂಪುರಿ ಅವರು ಬಳಿಕ ಶಿವರಾಜ್ ಕುಮಾರ್ ಅಭಿನಯದ ಎಕೆ 47, ದರ್ಶನ್ ಅಭಿನಯದ ಧೃವ, ಸಂತೆಯಲ್ಲಿ ನಿಂತ ಕಬೀರ, ಟೈಗರ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದರು. ಇದಲ್ಲದೆ ತೆಲುಗು ಮತ್ತು ಮಲಯಾಳಂ ಭಾಷೆಗಳ ಹಲವು ಚಿತ್ರಗಳಲ್ಲಿ ನಟ ಓಂಪುರಿ ವಿಶೇಷ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು.

ಕನ್ನಡ, ಹಿಂದಿ, ಇಂಗ್ಲೀಷ್, ಫ್ರೆಂಚ್, ತೆಲುಗು ಮತ್ತು ಮಲಯಾಳಂ ಸೇರಿದಂತೆ 7ಕ್ಕೂ ಅಧಿಕ ಭಾಷೆಗಳಲ್ಲಿ ಸುಮಾರು 100ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. 2013ರಲ್ಲಷ್ಟೇ ಓಂ ಪುರಿ ಅವರ ಪತ್ನಿ ನಂದಿತಾ ಪುರಿ ಅವರು ನಿಧನರಾಗಿದ್ದರು. ತಮ್ಮ ವಿಶೇಷ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದ ಓಂಪುರಿ ಅವರು ಪದ್ಮಶ್ರೀ ಪ್ರಶಸ್ತಿ, ರಾಷ್ಟ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ನಟ ಓಪುರಿ ಅವರ ನಿಧನಕ್ಕೆ ಬಾಲಿವುಡ್ ದಿಗ್ಭ್ರಮೆ ವ್ಯಕ್ತಪಡಿಸಿದ್ದು, ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

SCROLL FOR NEXT