ಪ್ರಧಾನಿ ಮೋದಿ ಹಾಗೂ ಪೋರ್ಚುಗಲ್ ಪ್ರಧಾನಿ ಆಂಟೋನಿಯೋ ಕೋಸ್ಟಾ 
ಪ್ರಧಾನ ಸುದ್ದಿ

ನಾನೊಬ್ಬ ಭಾರತೀಯನೆಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ: ಪೋರ್ಚುಗಲ್ ಪ್ರಧಾನಿ ಆಂಟೋನಿಯೋ ಕೋಸ್ಟಾ

ತಾನೊಬ್ಬ ಭಾರತೀಯನೆಂದು ಹೇಳಿಕೊಳ್ಳಲು ನನಗೆ ಅತ್ಯಂತ ಹೆಮ್ಮೆ ಎನ್ನಿಸುತ್ತದೆ ಎಂದು ಪೋರ್ಚುಗಲ್ ಪ್ರಧಾನಿ ಡಾ.ಆಂಟೋನಿಯೋ ಕೋಸ್ಟಾ ಅವರು ಭಾನುವಾರ ಹೇಳಿದ್ದಾರೆ.

ಬೆಂಗಳೂರು: ತಾನೊಬ್ಬ ಭಾರತೀಯನೆಂದು ಹೇಳಿಕೊಳ್ಳಲು ನನಗೆ ಅತ್ಯಂತ ಹೆಮ್ಮೆ ಎನ್ನಿಸುತ್ತದೆ ಎಂದು ಪೋರ್ಚುಗಲ್ ಪ್ರಧಾನಿ ಡಾ.ಆಂಟೋನಿಯೋ ಕೋಸ್ಟಾ ಅವರು ಭಾನುವಾರ ಹೇಳಿದ್ದಾರೆ.

ತುಮಕೂರು ರಸ್ತೆಯಲ್ಲಿನ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಏರ್ಪಡಿಸಿರುವ ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮದ 2ನೇ ದಿನ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ  ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ಪೋರ್ಚುಗಲ್ ಪ್ರಧಾನಿ ಆಂಟೋನಿಯೋ ಕೋಸ್ಟಾ ಅವರು, ನಮ್ಮ ಪೂರ್ವಜರು ಭಾರತ ದೇಶದ ಗೋವಾ ಮೂಲದವರೆಂದು ಹೇಳಿದರು. ಅಲ್ಲದೆ ಈ ಬಗ್ಗೆ ದಾಖಲೆಗಳನ್ನು ಪ್ರದರ್ಶಿಸಿದರು.  ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಭಾರತ ಮತ್ತು ಪೋರ್ಚುಗಲ್ ಉಭಯ ದೇಶಗಳ ಅಭಿವೃದ್ಧಿಗೆ ತಾನು ಆಸಕ್ತನಾಗಿದ್ದು, ಶಿಕ್ಷಣ, ಕೈಗಾರಿಕೆ, ಮೂಲಸೌಕರ್ಯ, ಹೂಡಿಕೆ ವಲಯದಲ್ಲಿ  ಭಾರತಕ್ಕೆ ತಾವು ನೆರವು ನೀಡಲು ಸಾದಾ ಸಿದ್ದ ಎಂದು ಹೇಳಿದರು. ಭಾರತೀಯರಿಗೆ ಯಾವುದೇ ರೀತಿಯ ನೆರವು ನೀಡಲು ತಾವು ಸದಾ ಸಿದ್ಧ ಎಂದು ಅವರು ಇದೇ ಸಂದರ್ಭದಲ್ಲಿ ಘೋಷಣೆ ಮಾಡಿದರು.

ಬಹಳ ಹಿಂದೆಯೇ ತಮ್ಮ ಕುಟುಂಬದವರು ಪೋರ್ಚುಗಲ್‌ಗೆ ವಲಸೆ ಹೋಗಿದ್ದು, ತಾನು ಭಾರತಕ್ಕೆ ಬಂದಾಗ ಗೋವಾಕ್ಕೆ ತೆರಳಿ ತಮ್ಮ ಸಂಬಂಧಿಕರನ್ನು ಭೇಟಿ ಮಾಡುತ್ತೇನೆ. ಪೋರ್ಚುಗಲ್ ಹಾಗೂ ಭಾರತದ ನಡುವೆ  ಶತಮಾನಕ್ಕೂ ಮೀರಿದ ಬಾಂಧವ್ಯವಿದೆ ಎಂದು ಆಂಟೋನಿಯೋ ಕೋಸ್ಟಾ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT