ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಕರ್ನಾಟಕ ಏಷ್ಯಾದ ಜ್ಞಾನ ಕೇಂದ್ರವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕ ರಾಜ್ಯ ಏಷ್ಯಾದ ಜ್ಞಾನ ಕೇಂದ್ರವಾಗಿದ್ದು, ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಉತ್ತಮ ಕೊಡುಗೆಯನ್ನು ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ...

14ನೇ ಪ್ರವಾಸಿ ಭಾರತೀಯ ದಿವಸ ಸಮ್ಮೇಳನದಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
Manjula VN
Updated On : 8 Jan 2017, 1:44 am

ಬೆಂಗಳೂರು: ಕರ್ನಾಟಕ ರಾಜ್ಯ ಏಷ್ಯಾದ ಜ್ಞಾನ ಕೇಂದ್ರವಾಗಿದ್ದು, ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಉತ್ತಮ ಕೊಡುಗೆಯನ್ನು ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.

ನಗರದ ಅಂತರಾಷ್ಟ್ರೀ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಡೆಯುತ್ತಿರುವ ಮೂರು ದಿನಗಳ 14ನೇ ಪ್ರವಾಸಿ ಭಾರತೀಯ ದಿವಸ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿರುವ ಅವರು, 14ನೇ ಪ್ರವಾಸಿ ಭಾರತೀಯ ದಿವಸವನ್ನು ರಾಜ್ಯದಲ್ಲಿ ಆಯೋಜಿಸಿರುವುದು ಸಂತಸ ತಂದಿದೆ. ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕಾರ್ಯಕ್ರಮ ಆಯೋಜಿಸಿದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಈ ಮೂಲಕ ಧನ್ಯವಾದ ಹೇಳುತ್ತಿದ್ದೇನೆಂದು ಹೇಳಿದ್ದಾರೆ.

ಕರ್ನಾಟಕ ರಾಜ್ಯ ಏಷ್ಯಾದ ಜ್ಞಾನ ಕೇಂದ್ರವಾಗಿದ್ದು, ದೇಶದ ಆರ್ಥಿಕ ವ್ಯವಸ್ಥೆಯ ಅಭಿವೃದ್ಧಿಗೆ ಉತ್ತಮ ಕೊಡುಗೆಯನ್ನು ನೀಡಿದೆ. ಜಾಗತಿಕ ಮಟ್ಟದಲ್ಲೂ ಆರ್ಥಿಕ ಪ್ರಗತಿಗೆ ರಾಜ್ಯ ಮೆಚ್ಚುಗೆಯನ್ನು ಪಡೆದುಕೊಂಡಿದೆ. ವಿದೇಶಿ ಬಂಡವಾಳ ಸೆಳೆಯುವಲ್ಲಿ ಕರ್ನಾಟಕ ಸಫಲವಾಗಿದ್ದು, ರಾಜ್ಯದಲ್ಲಿ ವಿದೇಶಿ ಬಂಡವಾಳ ಹೂಡಿಕೆಗೆ ವಿಫುಲ ಅವಕಾಶಗಳಿವೆ.

ವಿದೇಶಿ ಹೂಡಿಕೆಯಲ್ಲಿ ರಾಜ್ಯ ದೇಶದಲ್ಲಿಯೇ ನಾಲ್ಕನೆ ಸ್ಥಾನ ಪಡೆದುಕೊಂಡಿದ್ದು ಎನ್ಆರ್'ಐ ನೀತಿಯನ್ನು ಸಹ ಇತ್ತೀಚೆಗೆ ಪ್ರಕಟಿಸಿದ್ದೇವೆ. ಎನ್ ಆರ್ ಐಗಳನ್ನು ಸೆಳೆಯಲು ಇದು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿರುವ ಅವರು, ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಮಹಿಳೆಯರಿಗೆ ರಕ್ಷಣೆ ನೀಡುವುದು ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ. ಮಹಿಳೆಯರ ಸುರಕ್ಷತೆಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement