14ನೇ ಪ್ರವಾಸಿ ಭಾರತೀಯ ದಿನ: ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ 
ಪ್ರಧಾನ ಸುದ್ದಿ

14ನೇ ಪ್ರವಾಸಿ ಭಾರತೀಯ ದಿನ: ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ

ಮೂರು ದಿನಗಳ ಕಾಲ ನಡೆಯಲಿರುವ 14ನೇ ಪ್ರವಾಸಿ ಭಾರತೀಯ ದಿನ ಸಮ್ಮೇಳನ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಬೆಂಗಳೂರಿಗೆ ಆಗಮಿಸಿದ್ದಾರೆ...

ಬೆಂಗಳೂರು: ಮೂರು ದಿನಗಳ ಕಾಲ ನಡೆಯಲಿರುವ 14ನೇ ಪ್ರವಾಸಿ ಭಾರತೀಯ ದಿನ ಸಮ್ಮೇಳನ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಬೆಂಗಳೂರಿಗೆ ಆಗಮಿಸಿದ್ದಾರೆ.

ವಿಮಾನ ನಿಲ್ದಾಣಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬರುತ್ತಿದ್ದಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್, ರಾಜ್ಯಪಾಲ ವಜುಭಾಯ್ ವಾಲಾ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತ ಮಾಡಿದರು.

ಮೂರು ದಿನಗಳ ಕಾಲ 14ನೇ ಪ್ರವಾಸಿ ಭಾರತೀಯ ದಿನ ಸಮ್ಮೇಳನ ಬೆಂಗಳೂರಿನಲ್ಲಿ ನಡೆಯಲಿದ್ದು, ನಗದ ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಕಾರ್ಯಕ್ರಮ ನಡೆಯಲಿದೆ. ಭಾರತೀಯ ಅನಿವಾಸಿ ಭಾರತೀಯರು ಹಾಗೂ ವಿದೇಶದಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳು ಸೇರಿದಂತೆ ಇನ್ನಿತರೆ ವಿಚಾರಗೋಷ್ಠಿಗಳು ಕಾರ್ಯದಲ್ಲಿ ನಡೆಯಲಿದ್ದು, ಸಂಜೆ ವೇಳೆಗೆ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಗರಕ್ಕೆ ಆಗಮಿಸಿದ್ದು, ಪ್ರವಾಸಿ ಭಾರತೀಯ ದಿನದ ಬಗ್ಗೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ಪೋರ್ಚುಗಲ್ ಪ್ರಧಾನಿ ಆಂಟೊನಿಯೋ ಕೋಸ್ಟಾ ಅವರೂ ಕೂಡ ಅತಿಥಿಯಾಗಿ ಆಗಮಿಸಲಿದ್ದಾರೆಂದು ತಿಳಿದುಬಂದಿದೆ.

ಸಮ್ಮೇಳನಕ್ಕೆ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಗಳು ನಡೆದಿದ್ದು, ಬೆಳಿಗ್ಗೆ 9.30ರ ಸುಮಾರಿಗೆ ಪ್ರವಾಸಿ ಭಾರತೀಯ ದಿನ ಆಚರಣೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.

ಸೋಮವಾರ ಪ್ರವಾಸಿ ಭಾರತೀಯ ದಿನ ಸಮಾರೋಪಗೊಳ್ಳಲಿದ್ದು, ಇಡೀ ದಿನ ವಿಚಾರಗೋಷ್ಠಿಗಳು ನಡೆಯಲಿವೆ. ಸಮಾರೋಪ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ವಿದೇಶಾಂಗ ಸಚಿವಾಲಯದ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ಇನ್ನಿತರೆ ಅಧಿಕಾರಿಗಳು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿದ್ದ ರಿಗ್ಗಿಂಗ್ ವಾತಾವರಣದಲ್ಲಿ ನಿಜವಾಗಿಯೂ ಕೆಲಸ ಮಾಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ