ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಜಲ್ಲಿಕಟ್ಟು ನಿಷೇಧದ ವಿರುದ್ಧ ತಮಿಳುನಾಡಿನಲ್ಲಿ ಭಾರಿ ಪ್ರತಿಭಟನೆ

ಮಕರ ಸಂಕ್ರಾಂತಿ ಅಂಗವಾಗಿ ಹೋರಿ ಪಳಗಿಸುವ ಪ್ರಾಚೀನ ಜಾಲಿ ಆಟ ಜಲ್ಲಿಕಟ್ಟಿಗೆ ನಿಷೇಧ ಹೇರಿರುವ ಹಿನ್ನಲೆಯಲ್ಲಿ, ನಿಷೇಧ ವಿರೋಧಿಸಿ ಮಧುರೈನ ಅಲಾಂಗನಲ್ಲೂರ್ ಪಟ್ಟಣದಲ್ಲಿ ಜನ ಸಾವಿರಾರು ಸಂಖ್ಯೆಯಲ್ಲಿ

ಚೆನ್ನೈ: ಮಕರ ಸಂಕ್ರಾಂತಿ ಅಂಗವಾಗಿ ಹೋರಿ ಪಳಗಿಸುವ ಪ್ರಾಚೀನ ಜಾಲಿ ಆಟ ಜಲ್ಲಿಕಟ್ಟಿಗೆ ನಿಷೇಧ ಹೇರಿರುವ ಹಿನ್ನಲೆಯಲ್ಲಿ, ನಿಷೇಧ ವಿರೋಧಿಸಿ ಮಧುರೈನ ಅಲಾಂಗನಲ್ಲೂರ್ ಪಟ್ಟಣದಲ್ಲಿ ಜನ ಸಾವಿರಾರು ಸಂಖ್ಯೆಯಲ್ಲಿ ಬೀದಿಗಿಳಿದು ಪ್ರತಿಭಟಿಸಿದ್ದಾರೆ.
ಜಲ್ಲಿಕಟ್ಟು ಪ್ರಖ್ಯಾತವಾಗಿರುವ ಈ ಪಟ್ಟಣದ್ಲಲಿ ಮಹಿಳೆಯರು ಸೇರಿದಂತೆ ಭಾರಿ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಜನ ಭಾಗಿಯಾಗಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. 
ಈಮಧ್ಯೆ ಸುಪ್ರೀಂ ಕೋರ್ಟ್ ನಿಷೇಧವನ್ನು ಉಲ್ಲಂಘಿಸಿ ತಮಿಳುನಾಡಿನಿಂದ ಕರೈಕುಡಿಯಲ್ಲಿ ಜಲ್ಲಿಕಟ್ಟು ಪಂದ್ಯವನ್ನು ಆಯೋಜಿಸಲಾಗಿತ್ತು. ಇನ್ನು ಕೆಲವು ಕಡೆ ರೇಖ್ಲಾ ಅಥವಾ ಎತ್ತಿನ ಗಾಡಿ ಪಂದ್ಯವನ್ನು ಆಯೋಜಿಸಲಾಗಿತ್ತು. 
ಈ ಪಂದ್ಯ ಜಲ್ಲಿಕಟ್ಟಿಗೆ ಸಂಬಂಧಿಸಿಲ್ಲವಾದ್ದರಿಂದ ಪೊಲೀಸರು ಇದನ್ನು ತಡೆಯಲು ಮುಂದಾಗಲಿಲ್ಲ ಎಂದು ತಿಳಿದುಬಂದಿದೆ. ಇದೆ ಸಮಯದಲ್ಲಿ ವರದಿಗಾರರೊಂದಿಗೆ ಮಾತನಾಡಿರುವ ಕೇಂದ್ರದ ನೌಕಾ ರಾಜ್ಯ ಸಚಿವ ಪೊನ್ ರಾಧಾಕೃಷ್ಣ, ಇದನ್ನು ಸುಪ್ರೀಂ ಕೋರ್ಟ್ ಉಲ್ಲಂಘನೆ ಎಂದು ತಿಳಿಯಬಾರದು ಬದಲಾಗಿ ಜನರ ಭಾವನೆಗಳು ಎಂದು ಓದಬೇಕು ಎಂದಿದ್ದಾರೆ. 
ಮೇ ೨೦೧೪ ರಲ್ಲಿ ಸುಪ್ರೀಂ ಕೋರ್ಟ್ ತಮಿಳುನಾಡಿನಲ್ಲಿ ಜಲ್ಲಿಕಟ್ಟು ಪಂದ್ಯವನ್ನು ಆಯೋಜಿಸುವುದಕ್ಕೆ ನಿಷೇಧ ಹೇರಿತ್ತು. ಜಲ್ಲಿಕಟ್ಟು ಅಥವಾ ಎತ್ತಿನ ಗಾಡಿ ಸ್ಪರ್ಧೆಗೆ ಎತ್ತುಗಳನ್ನು ಬಳಸಬಾರದು ಎಂದು ಕೂಡ ಸುಪ್ರೀಂ ಕೋರ್ಟ್ ತಾಕೀತು ಮಾಡಿತ್ತು. 
ಈ ನಿಷೇಧ ಹೊರ ಬಿದ್ದಾಗಲಿಂದಲೂ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ತಮಿಳುನಾಡು ಜನತೆ ಆಗ್ರಹಿಸುತ್ತಾ ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ