ಬಾಲಿವುಡ್ ನಟ ಸಲ್ಮಾನ್ ಖಾನ್ 
ಪ್ರಧಾನ ಸುದ್ದಿ

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ ತೀರ್ಪು ಇಂದು: ಆರೋಪ ಸಾಬೀತಾದರೆ ಸಲ್ಮಾನ್'ಗೆ 7 ವರ್ಷ ಜೈಲು

1998ರಲ್ಲಿ ಕೃಷ್ಣ ಮೃಗ ಭೇಟಿಯಾಡಿದ ಅಕ್ರಮ ಶಸ್ತ್ರಾಸ್ತ್ರ ಪ್ರಕರಣ ಸಂಬಂಧ ಜೋಧ್ಪುರ ನ್ಯಾಯಾಲಯ ಬುಧವಾರ ಅಂತಿಮ ತೀರ್ಪು ಪ್ರಕಟಿಸಲಿದೆ...

ಜೋಧಪುರ್; 1998ರಲ್ಲಿ ಕೃಷ್ಣ ಮೃಗ ಭೇಟಿಯಾಡಿದ ಅಕ್ರಮ ಶಸ್ತ್ರಾಸ್ತ್ರ ಪ್ರಕರಣ ಸಂಬಂಧ ಜೋಧ್ಪುರ ನ್ಯಾಯಾಲಯ ಬುಧವಾರ ಅಂತಿಮ ತೀರ್ಪು ಪ್ರಕಟಿಸಲಿದ್ದು, ಒಂದು ವೇಳೆ ನಟ ಸಲ್ಮಾನ ಖಾನ್ ವಿರುದ್ಧದ ಆರೋಪ ಸಾಬೀತಾಗಿದ್ದೇ ಅದರೆ, 7 ವರ್ಷ ಜೈಲು ಶಿಕ್ಷೆಯಾಗಲಿದೆ.

1998ರಲ್ಲಿ ಹಮ್  ಸಾಥ್ ಸಾಥ್  ಹೈ ಸಿನಿಮಾ ಶೂಟಿಂಗ್​ ವೇಳೆ  ಜೋಧ್‍ಪುರದ ಬಳಿಯಲ್ಲಿರುವ ಕಂಕಣಿ ಗ್ರಾಮದಲ್ಲಿ ಸಲ್ಮಾನ್ ಖಾನ್​ ಕೃಷ್ಣಮೃಗ ಬೇಟೆಯಾಡಿದ್ದರು. ರಕ್ಷಿತ ಅರಣ್ಯ ಪ್ರದೇಶದಲ್ಲಿ ಕೃಷ್ಣಮೃಗ ಬೇಟೆಯಾಡಿದ್ದ ಸಲ್ಮಾನ್​ ಖಾನ್​ ವಿರುದ್ಧ ಅರಣ್ಯ ಇಲಾಖೆ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿತ್ತು. ಈ ಪ್ರಕರಣಕ್ಕೆ ಸಂಬಂಧಸಿದಂತೆ ಸಲ್ಮಾನ್ ಖಾನ್ 2006 ರ ಏಪ್ರಿಲ್ ಮತ್ತು 2007ರ ಆಗಸ್ಟ್​​ನಲ್ಲಿ ಎರಡು ಬಾರಿ ಜೈಲುವಾಸ ಅನುಭವಿಸಿದ್ದಾರೆ.

ಜನವರಿ 9 ರಂದು ನಡೆದ ವಿಚಾರಣೆಯ ದಿನದಂದು ಎಲ್ಲಾ ರೀತಿಯ ವಾದ ಹಾಗೂ ಪ್ರತಿವಾದಗಳು ಅಂತ್ಯಗೊಂಡಿತ್ತು. ಈ ಹಿನ್ನಲೆಯಲ್ಲಿ ನ್ಯಾಯಾಲಯವು ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದ ತೀರ್ಪನ್ನು ಜನವರಿ 18ಕ್ಕೆ ಪ್ರಕಟಿಸುವುದಾಗಿ ತಿಳಿಸಿತ್ತು. ಅಲ್ಲದೆ, ನಟ ಸಲ್ಮಾನ್ ಖಾನ್ ಅವರು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಿತ್ತು.

ಇದರಂತೆ ಇಂದು ನ್ಯಾಯಾಲಯ ಪ್ರಕರಣ ಸಂಬಂಧ ಅಂತಿಮ ತೀರ್ಪವನ್ನು ಪ್ರಕಟಿಸಲಿದ್ದು, ಸಲ್ಮಾನ್ ಗಿಂದು ಅಗ್ನಿ ಪರೀಕ್ಷೆಯ ದಿನವಾಗಲಿದೆ. ಒಂದು ವೇಳೆ ಸಲ್ಮಾನ್ ಅವರ ವಿರುದ್ಧ ತೀರ್ಪು ಪ್ರಕಟಗೊಂಡಿದ್ದೇ ಆದರೆ, 7 ವರ್ಷ ಜೈಲು ಶಿಕ್ಷೆಯನ್ನು ಅನುಭವಿಸಲಿದ್ದಾರೆ.

ನ್ಯಾಯಾಲಯದ ತೀರ್ಪು ಹಿನ್ನಲೆಯಲ್ಲಿ ಸಲ್ಮಾನ್ ಅವರೊಂದಿಗೆ ಒಪ್ಪಂದ ಮಾಡಿಕೊಂಡಿರುವ ನಿರ್ಮಾಪಕರ ತಲೆ ಕೂಡ ಬಿಸಿಯಾಗತೊಡಗಿದೆ. ಸಲ್ಮಾನ್'ಗೆ ಜೈಲು ಶಿಕ್ಷೆಯಾಗಿದ್ದೇ ಆದರೆ, ಇದು ಬಾಲಿವುಡ್ ಮೇಲೆ ಪರಿಣಾಮ ಬೀರಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT