ರಜನಿಕಾಂತ್ 
ಪ್ರಧಾನ ಸುದ್ದಿ

ಜಲ್ಲಿಕಟ್ಟು ಹೋರಾಟ: ಮರೀನಾ ಬೀಚ್ ಬೃಹತ್ ಪ್ರತಿಭಟನೆಯಲ್ಲಿ ರಜನಿಕಾಂತ್ ಭಾಗಿ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ವಿವಾದಿತ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟು ಮೇಲಿನ ನಿಷೇಧ ತೆರವುಗೊಳಿಸುವಂತೆ....

ಚೆನ್ನೈ: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ವಿವಾದಿತ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟು ಮೇಲಿನ ನಿಷೇಧ ತೆರವುಗೊಳಿಸುವಂತೆ ಆಗ್ರಹಿಸಿ ಚೆನ್ನೈನ ಮರೀನಾ ಬೀಚ್ ನಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಶುಕ್ರವಾರ ಭಾಗಿಯಾಗುವ ಮೂಲಕ ಜಲ್ಲಿಕಟ್ಟು ಹೋರಾಟವನ್ನು ಬೆಂಬಲಿಸಿದ್ದಾರೆ.
ರಜನಿಕಾಂತ್ ಅವರು ಇಂದು ಮಧ್ಯಾಹ್ನ ಮರೀನಾ ಬೀಚ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ತಮಿಳು ಚಿತ್ರೋದ್ಯಮದ ಇನ್ನೂ ಹಲವು ನಟ, ನಟಿಯರು ಸಹ ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಮುಂಚೆ ಜಲ್ಲಿಕಟ್ಟನ್ನು ಬಹಿರಂಗವಾಗಿಯೇ ಬೆಂಬಲಿಸಿದ್ದ ಮತ್ತೊಬ್ಬ ಸೂಪರ್ ಸ್ಟಾರ್ ಕಮಲ್ ಹಾಸನ್ ಅವರು ಸಹ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದಾರೆ.
ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಸಹ ಜಲ್ಲಿಕಟ್ಟು ಪ್ರತಿಭಟನೆ ಬೆಂಬಲಸಿ ಇಂದು ಒಂದು ದಿನದನ ಉಪವಾಸ ಮಾಡುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ.
ತಮಿಳುನಾಡಿನಲ್ಲಿ ಪೊಂಗಲ್ ಹಬ್ಬದಂದು ನಡೆಸಲಾಗುತ್ತಿದ್ದ ಜಲ್ಲಿಕಟ್ಟು ಕ್ರೀಡೆಯನ್ನು 2014ರಲ್ಲಿ ಸುಪ್ರೀಂ ಕೋರ್ಟ್ ನಿಷೇಧಿಸಿದೆ. ಇದರ ವಿರುದ್ಧ ಈಗ ತಮಿಳಿನಾಡಿನಾದ್ಯಂತ ಭಾರಿ ಪ್ರತಿಭಟನೆ ನಡೆಯುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ