ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಜ.27ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ವಿಜಯ್ ಮಲ್ಯಗೆ ಕರ್ನಾಟಕ ಹೈಕೋರ್ಟ್ ಆದೇಶ

ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ಯದ ದೊರೆ ವಿಜಯ್ ಮಲ್ಯ ಅವರಿಗೆ ಜನವರಿ 27ರಂದು ಖುದ್ದು...

ವಿಜಯ್ ಮಲ್ಯ
Lingaraj Badiger
Updated On : 21 Jan 2017, 4:36 am
ಬೆಂಗಳೂರು: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ಯದ ದೊರೆ ವಿಜಯ್ ಮಲ್ಯ ಅವರಿಗೆ ಜನವರಿ 27ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಕರ್ನಾಕಟ ಹೈಕೋರ್ಟ್‌ ಶುಕ್ರವಾರ ಆದೇಶ ನೀಡಿದೆ.
ಕಿಂಗ್ ಫಿಷರ್ ಏರ್ ಲೈನ್ಸ್ ಗೆ ಸಾಲ ನೀಡಿದ್ದ ಎಸ್ ಬಿಐ ನೇತೃತ್ವದ ಬ್ಯಾಂಕ್ ಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಯಂತ್ ಪಟೇಲ್  ಹಾಗೂ ನ್ಯಾಯಮೂರ್ತಿ ಅರವಿಂದ್ ಕುಮಾರ್ ನೇತೃತ್ವದ ವಿಭಾಗೀಯ ಪೀಠ, ಮೂರನೇ ಬಾರಿ ವಿಚಾರಣೆಗೆ ಹಾಜರಾಗುವಂತೆ ಮದ್ಯದ ದೊರೆಗೆ ಆದೇಶ ನೀಡಿದೆ.
ವಿಜಯ್ ಮಲ್ಯ ವಿರುದ್ಧದ ಆರೋಪಗಳಲ್ಲಿ ಮೇಲ್ನೋಟಕ್ಕೆ ಸತ್ಯಾಂಶವಿದ್ದು, ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಖುದ್ದು ಹಾಜರಾಗಲೇಬೇಕು ಎಂದು ಕೋರ್ಟ್ ಆದೇಶ ನೀಡಿದೆ.

Advertisement

Advertisement

ಈ ಹಿಂದಿನ ಆದೇಶದಂತೆ ವಿಜಯ್ ಮಲ್ಯ ಅವರು ಜನವರಿ 19ರಂದು ಕೋರ್ಟ್ ನಲ್ಲಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಆ ದಿನ ನ್ಯಾಯಮೂರ್ತಿಗಳು ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ಹಿಂದಿನ ಆದೇಶ ಪರಿಷ್ಕರಿಸಿ ಜ.27ರಂದು ಬರುವಂತೆ ಸೂಚನೆ ನೀಡಿದೆ.
ವಿಜಯ್ ಮಲ್ಯ ತನ್ನ ಆಸ್ತಿಯನ್ನು ಪರಭಾರೆ ಮಾಡುವುದಿಲ್ಲ ಎಂದು ಕೋರ್ಟ್ ಗೆ ವಾಗ್ದಾನ ನೀಡಿ, ಅದನ್ನು ಉಲ್ಲಂಘಿಸಿ ಮಾರಾಟ ಮಾಡಿದ್ದಾರೆ ಎಂದು ಬ್ಯಾಂಕ್ ಗಳ ಒಕ್ಕೂಟ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments