ನವದೆಹಲಿ: ಹಿರಾಖಂಡ್ ಎಕ್ಸೆ ಪ್ರೆಸ್ ರೈಲು ದುರಂತ ಸಂಬಂಧ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದು, ದುರಂತ ವಿಷಾದನೀಯ ಎಂದು ಹೇಳಿದ್ದಾರೆ.
ದುರಂತ ಸಂಬಂಧ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ರೈಲು ಹಳಿ ತಪ್ಪಿದ್ದರಿಂದ ದುರಂತ ಸಂಭವಿಸಿದೆ. ದುರಂತ ನಿಜಕ್ಕೂ ನೋವು ತಂದಿದೆ. ದುರಂತದಲ್ಲಿ ಗಾಯಗೊಂಡ ಪ್ರಯಾಣಿಕರು ಶೀಘ್ರ ಚೇತರಿಕೆ ಕಾಣುವಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆ. ರೈಲ್ವೇ ಇಲಾಖೆ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆಯಲ್ಲಿ ತೊಡಗಿದ್ದು, ಪ್ರಯಾಣಿಕರ ರಕ್ಷಣೆಗೆ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಜಗದಲ್ ಪುರ-ಭುವನೇಶ್ವರ ನಡುವೆ ಸಂಚರಿಸುತ್ತಿದ್ದ ರೈಲು ಹಿರಾಖಂಡ್ ಎಕ್ಸೆಪ್ರೆಸ್ ರೈಲು ಆಂಧ್ರಪ್ರದೇಶದ ರಾಯಘಡ ಸಮೀಪ ಕೂನೇರು ನಿಲ್ದಾಣದ ಬಳಿ ಹಳಿ ತಪ್ಪಿದೆ. ಜಗದಲ್ ಪುರ-ಭುವನೇಶ್ವರ ನಡುವೆ ಸಂಚರಿಸುತ್ತಿದ್ದ ರೈಲು ಹಿರಾಖಂಡ್ ಎಕ್ಸೆಪ್ರೆಸ್ ರೈಲು ನಿನ್ನೆ ರಾತ್ರಿ 11 ಗಂಟೆ ಸುಮಾರಿನಲ್ಲಿ ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯ ಕೂನೇರು ರೈಲು ನಿಲ್ದಾಣದ ಸಮೀಪ ಹಳಿ ತಪ್ಪಿತ್ತು. ರೈಲಿನ ಎಂಜಿನ್ ಸೇರಿದಂತೆ 9 ಬೋಗಿಗಳು ಹಳಿ ತಪ್ಪಿದ ಪರಿಣಾಮ ರೈಲಿನಲ್ಲಿದ್ದ ಸುಮಾರು 23 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಅಂತೆಯೇ ಸುಮಾರು 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.