ಉ.ಪ್ರದೇಶ ಮೀಸಲಾತಿ ಅಧಿಸೂಚನೆಗೆ ಹೈಕೋರ್ಟ್ ತಡೆ, ಅಖಿಲೇಶ್ ಗೆ ಹಿನ್ನಡೆ
ಹಿಂದೂಳಿದ ವರ್ಗದ 17 ಉಪ-ಜಾತಿಗಳನ್ನು ಪರಿಷ್ಠ ಜಾತಿ(ಎಸ್ ಸಿ)ಗೆ ಸೇರಿಸಿ ಉತ್ತರ ಪ್ರದೇಶ ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಮಂಗಳವಾರ...
ಲಖನೌ: ಹಿಂದೂಳಿದ ವರ್ಗದ 17 ಉಪ-ಜಾತಿಗಳನ್ನು ಪರಿಷ್ಠ ಜಾತಿ(ಎಸ್ ಸಿ)ಗೆ ಸೇರಿಸಿ ಉತ್ತರ ಪ್ರದೇಶ ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಮಂಗಳವಾರ ಅಲಹಬಾದ್ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರಿಗೆ ಭಾರಿ ಹಿನ್ನಡೆಯಾಗಿದೆ.
ಕಳೆದ ಡಿಸೆಂಬರ್ ನಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಂಪುಟ ಸಭೆ, ಕಹರ್, ಕಶ್ಯಪ್, ಕೆವಾಟ್, ನಿಶಾದ್, ಬಿಂದ್ ಭಾರ್, ಪ್ರಜಾಪತಿ, ರಾಜ್ ಭಾರ್ ಸೇರಿದಂತೆ 17 ಉಪ ಜಾತಿಗಳನ್ನು ಎಸ್ ಸಿಗೆ ಸೇರಿಸುವ ಪ್ರಸ್ತಾವನೆಗೆ ಒಪ್ಪಿಗೆ ನೀಡಿತ್ತು.
ಉತ್ತರ ಪ್ರದೇಶ ಸರ್ಕಾರದ ಅಧಿಸೂಚನೆಗೆ ವಿರೋಧ ವ್ಯಕ್ತಪಡಿಸಿದ್ದ ಪ್ರತಿಪಕ್ಷ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ, ಇದೊಂದು ದೊಡ್ಡ ಡ್ರಾಮ ಎಂದು ವ್ಯಂಗ್ಯವಾಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.