ನಟ ಕಮಲ್ ಹಾಸನ್ ಹಾಗೂ ವೈರಲ್ ವಿಡಿಯೋ 
ಪ್ರಧಾನ ಸುದ್ದಿ

ತಮಿಳುನಾಡು ಪೊಲೀಸರಿಂದಲೇ ಆಟೋಗೆ ಬೆಂಕಿ; ವಿಡಿಯೋ ಟ್ವೀಟ್ ಮಾಡಿ ಕಮಲ್ ಹಾಸನ್ ಆಕ್ರೋಶ

ಜಲ್ಲಿಕಟ್ಟು ಸಂಬಂಧ ತಮಿಳುನಾಡಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿರುವಂತೆಯೇ ಪೊಲೀಸ್ ಅಧಿಕಾರಿಯೊಬ್ಬ ಆಟೋಗೆ ಬೆಂಕಿ ಇಡುತ್ತಿರುವ ದೃಶ್ಯ ಇದೀಗ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ.

ಚೆನ್ನೈ: ಜಲ್ಲಿಕಟ್ಟು ಸಂಬಂಧ ತಮಿಳುನಾಡಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿರುವಂತೆಯೇ ಪೊಲೀಸ್ ಅಧಿಕಾರಿಯೊಬ್ಬ ಆಟೋಗೆ ಬೆಂಕಿ ಇಡುತ್ತಿರುವ ದೃಶ್ಯ ಇದೀಗ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ.

ಖ್ಯಾತ ತಮಿಳು ನಟ ಕಮಲ್ ಹಾಸನ್ ಸೇರಿದಂತೆ ವಿವಿಧ ಮಂದಿ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು, ಪೊಲೀಸ್ ಕೃತ್ಯಕ್ಕೆ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇವಲ ಸಾಮಾಜಿಕ  ಜಾಲತಾಣಗಳಲ್ಲಿ ಅಷ್ಟೇ ಅಲ್ಲದೇ ಮಾಧ್ಯಮಗಳಲ್ಲೂ ಈ ವಿಡಿಯೋ ವ್ಯಾಪಕವಾಗಿ ಸುದ್ದಿಗೆ ಗ್ರಾಸವಾಗುತ್ತಿದ್ದು, ಪೊಲೀಸರ ಕೃತ್ಯಕ್ಕೆ ಎಲ್ಲಡೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.

ಕೆಲವು ಪ್ರತಿಭಟನಾಕಾರರು ತಮ್ಮ ವಿರುದ್ಧ ಲಾಠಿ ಪ್ರಹಾರವನ್ನು ಷಡ್ಯಂತ್ರ ಎಂದು ಹೇಳಿದ್ದು, ಪೊಲೀಸರೇ ಹಿಂಸೆ ಸೃಷ್ಟಿಸುವ ಮೂಲಕ ಶಾಂತಿಯುತವಾಗಿ ಸಾಗುತ್ತಿದ್ದ ಪ್ರತಿಭಟನೆಯನ್ನು ಹಿಂಸಾರೂಪಕ್ಕೆ ತಿರುಗಿಸಿದ್ದಾರೆ ಎಂದು  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಅಧಿಕೃತ ಬಗ್ಗೆ ಇನ್ನೂ ಮಾಹಿತಿ ಇಲ್ಲ!
ಆದರೆ ಪ್ರಸ್ತುತ ವೈರಲ್ ಆಗಿರುವ ವಿಡಿಯೋ ಕುರಿತ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ವಿಡಿಯೋ ಪ್ರತಿಭಟನೆಯದ್ದೇ ಅಥವಾ ಹಳೆಯ ವಿಡಿಯೋ ಆಗಿದೆಯೇ ಎಂಬ ಯಾವುದೇ ಪುರಾವೆಗಳು ಲಭ್ಯವಾಗಿಲ್ಲ. ಆದರೂ ಈ ವಿಡಿಯೋ  ಮಾತ್ರ ಇದೀಗ ತಮಿಳುನಾಡು ಪೊಲೀಸರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದು, ವಿಡಿಯೋ ಕುರಿತಂತೆ ತನಿಖೆ ನಡೆಸುವುದಾಗೆ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ. ಅಂತೆಯೇ ಮತ್ತೋರ್ವ ಪೊಲೀಸ್ ಅಧಿಕಾರಿ ಟಿಕೆ ರಾಜೇಂದ್ರ  ಎಂಬುವವರು ವಿಡಿಯೋ ನಕಲಿ ಎಂಬ ಅನುಮಾನ ಮೂಡುತ್ತಿದ್ದು, ಗ್ರಾಫಿಕ್ಸ್ ಆಗಿರಬಹುದು ಎಂಬ ಶಂಕೆ ಇದೆ. ಆದರೂ ವಿಡಿಯೋ ಕುರಿತಂತೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಮರೀನಾ ಬೀಚ್ ನಲ್ಲಿ ಮುಂದುವರೆದ ಪ್ರತಿಭಟನೆ
ಇನ್ನು ಮರೀನಾ ಬೀಚ್ ನಲ್ಲಿ ಬೀಡು ಬಿಟ್ಟಿರುವ ಸುಮಾರು 2 ಸಾವಿರ ಪ್ರತಿಭಟನಾಕಾರರು ಜಲ್ಲಿಕಟ್ಟು ಸಂಬಂಧ ಶಾಶ್ವತ ಕ್ರಮಕ್ಕೆ ಸರ್ಕಾರ ಮುಂದಾಗುವವರೆಗೂ ಮರೀನಾ ಬೀಚ್ ಬಿಟ್ಟು ತೆರಳುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್