ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹಾಗೂ ಕಂಬಳ ಕ್ರೀಡೆ 
ಪ್ರಧಾನ ಸುದ್ದಿ

ಕಂಬಳಕ್ಕೂ ಜಲ್ಲಿಕಟ್ಟು ಮಾದರಿಯ ಬೆಂಬಲ ನೀಡಲು ಕೇಂದ್ರ ಸಿದ್ಧ: ರವಿಶಂಕರ್ ಪ್ರಸಾದ್

ಜಲ್ಲಿಕಟ್ಟು ಮಾದರಿಯಲ್ಲೇ ಕರ್ನಾಟಕದ ಸಾಂಸ್ಕೃತಿಕ ಕ್ರೀಡೆ ಕಂಬಳಕ್ಕೂ ಕೇಂದ್ರ ಸರ್ಕಾರ ಬೆಂಬಲ ನೀಡಲು ಸಿದ್ಧ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಬುಧವಾರ ಮಂಗಳೂರಿನಲ್ಲಿ ಹೇಳಿದ್ದಾರೆ.

ಮಂಗಳೂರು: ಜಲ್ಲಿಕಟ್ಟು ಮಾದರಿಯಲ್ಲೇ ಕರ್ನಾಟಕದ ಸಾಂಸ್ಕೃತಿಕ ಕ್ರೀಡೆ ಕಂಬಳಕ್ಕೂ ಕೇಂದ್ರ ಸರ್ಕಾರ ಬೆಂಬಲ ನೀಡಲು ಸಿದ್ಧ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಬುಧವಾರ ಮಂಗಳೂರಿನಲ್ಲಿ ಹೇಳಿದ್ದಾರೆ.

ನೀತಿ ಆಯೋಗ ಏರ್ಪಡಿಸಿದ್ದ ಡಿಜಿ ಧನ್ ಮೇಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಮಂಗಳೂರಿಗೆ ಆಗಮಿಸಿದ್ದ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು, ಹೇಗೆ ತಮಿಳುನಾಡು ಸರ್ಕಾರ ಜಲ್ಲಿಕಟ್ಟು ಮೇಲಿದ್ದ  ಅಡೆತಡೆಗಳನ್ನು ಸುಗ್ರೀವಾಜ್ಞೆ ಮೂಲಕ ನಿವಾರಿಸಿತೋ ಅದೇ ರೀತಿ ಕರ್ನಾಟಕ ಸರ್ಕಾರ ಕೂಡ ಮೊದಲು ಕಂಬಳ ಆಚರಣೆ ಮೇಲಿರುವ ಅಡೆತಡೆಗಳನ್ನು ನಿವಾರಿಸಬೇಕು. ಜಲ್ಲಿಕಟ್ಟು ಮಾದರಿಯಲ್ಲೇ ಕರ್ನಾಟಕದ ಕಂಬಳ  ಆಚರಣೆಗೂ ಕೇಂದ್ರ ಸರ್ಕಾರ ಬೆಂಬಲ ನೀಡಲು ಸಿದ್ಧವಿದ್ದು, ಕರ್ನಾಟಕ ಸುಗ್ರೀವಾಜ್ಞೆಗೆ ಮುಂದಾದರೆ ಆ ಸಂಬಂಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಸಚಿವರು ಹೇಳಿದ್ದಾರೆ.

ಕೇಂದ್ರ ಸರ್ಕಾರ ಜಾನಪದ ಸಂಪ್ರದಾಯಗಳನ್ನು ಗೌರವಿಸುತ್ತದೆ. ಕರ್ನಾಕದ ಸಾಂಸ್ಕೃತಿಕ ಕ್ರೀಡೆ ಕಂಬಳವನ್ನು ಉಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಕೈಗೊಳ್ಳುವ ಯಾವುದೇ ಕ್ರಮಕ್ಕೂ ಕೇಂದ್ರ ಸರ್ಕಾರ ಪೂರಕವಾಗಿ  ಸ್ಪಂದಿಸಲಿದೆ ಎಂದು ರವಿಶಂಕರ್ ಪ್ರಸಾದ್ ಹೇಳಿದರು.

ಇದಕ್ಕೂ ಮೊದಲು ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲ್ ನೇತೃತ್ವದ ಬಿಜೆಪಿ ಸಂಸದರ ತಂಡ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರನ್ನು ಭೇಟಿ ಮಾಡಿ "ಕಂಬಳ" ಕ್ರೀಡೆ ಮೇಲಿನ  ನಿಷೇಧ ತೆರವುಗೊಳಿಸುವ ಸಂಬಂಧ ಮನವಿ ಸಲ್ಲಿಸಿದರು.

ಲೋಕಸಭೆಯಲ್ಲಿ ಕಂಬಳ ಕುರಿತು ಪ್ರಶ್ನೆ: ನಳೀನ್ ಕುಮಾರ್ ಕಟೀಲ್
ಇನ್ನು ಈ ಹಿಂದೆ ಕಂಬಳ ಆಯೋಜಕರ ಜೊತೆ ಮಾತನಾಡಿದ್ದ ಸಂಸದ ನಳೀನ್ ಕುಮಾರ್ ಕಟೀಲ್ ಅವರು, ಸಾಂಸ್ಕೃತಿಕ ಕ್ರೀಡೆಯನ್ನು ಉಳಿಸಿಕೊಳ್ಳುವ ಸಂಬಂದ ತೆಗೆದುಕೊಳ್ಳಬೇಕಾದ ಎಲ್ಲ ಕ್ರಮಗಳನ್ನು ತಾವು  ತೆಗೆದುಕೊಳ್ಳುತ್ತೇವೆ. ಕಂಬಳ ಕ್ರೀಡೆ ರಕ್ಷಣೆಗೆ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ. ಇದೇ ಜನವರಿ 28ರಂದು ಮೂಡಬಿದಿರಿಯಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಪಾಲ್ಗೊಂಡು ಕಂಬಳದ ಮೇಲಿನ ನಿಷೇಧವನ್ನು ತೆರವುಗೊಳಿಸುವಂತೆ  ಒತ್ತಾಯಿಸುತ್ತೇನೆ. ಇದೇ ಜನವರಿ 30ರಂದು ನ್ಯಾಯಾಲಯದಲ್ಲಿ ಕಂಬಳ ನಿಷೇಧ ಕುರಿತು ವಿಚಾರಣೆ ನಡೆಯಲಿದೆ. ಅಂದೇ ಲೋಕಸಭಾ ಅಧಿವೇಶನ ಕೂಡ ನಡೆಯಲಿದೆ ಮತ್ತು ಫೆಬ್ರವರಿ 6ರಿಂದ ಕರ್ನಾಟಕದಲ್ಲೂ ಕಲಾಪ  ಆರಂಭಗೊಳ್ಳಲಿದೆ. ಇದು ಉಭಯ ಸದನಗಳಲ್ಲಿ ಕಂಬಳದ ಮೇಲಿನ ನಿಷೇಧ ತೆರವುಗೊಳಿಸುವ ಸಂಬಂಧ ಚರ್ಚೆ ನಡೆಸಲು ಸಹಕಾರಿಯಾಗುತ್ತದೆ.

ಕಂಬಳ ಉಳಿಸಿಕೊಳ್ಳುವ ನಿಟ್ಟಿನಲ್ಲಿ ನಾವು ಕನ್ನಡಿಗರು ಒಂದಾಗಿ ಹೋರಾಟ ನಡೆಸಬೇಕಿದೆ. ಜಾತಿ, ಧರ್ಮ ಮತ್ತು ರಾಜಕೀಯ ಪಕ್ಷಗಳನ್ನು ಬದಿಗೊತ್ತಿ ಒಟ್ಟಾಗಿ ಹೋರಾಟ ನಡೆಸಬೇಕಿದೆ. ಇದಕ್ಕಾಗಿ ತಾವು ಎಲ್ಲ ಸಮುದಾಯ,  ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳೊಂದಿಗೆ ಚರ್ಚೆ ನಡೆಸುತ್ತೇವೆ ಮತ್ತು ಕಂಬಳ ನಿಷೇಧ ತೆರವು ಕುರಿತು ಜಾಗೃತಿ ಮೂಡಿಸಲು ಮಾನವ ಸರಪಳಿ ನಿರ್ಮಿಸಿ ಹೋರಾಟ ಮಾಡುತ್ತೇವೆ ಎಂದು ನಳೀನ್ ಕುಮಾರ್ ಕಟೀಲ್  ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!