ಪಣಜಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ವಕ್ತಾರ ಹಾಗೂ ಮಾಜಿ ಶಾಸಕ ಯು.ಭೂಪತಿ ಅವರು ಹೃದಯಾಘಾತದಿಂದ ಹಠಾತ್ ನಿಧನರಾಗಿದ್ದಾರೆ.
ಗೋವಾ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕೆ ತೆರಳಿದ್ದ ಭೂಪತಿ ಅವರು ಇದ್ದಕ್ಕಿದ್ದಂತೆ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ.
ಭೂಪತಿ ಅವರು ಪತ್ನಿ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ, ಸಾಹಿತಿ ವಸುಂಧರಾ ಭೂಪತಿ ಹಾಗೂ ಮಕ್ಕಳಾದ ನಟ, ನಿರ್ದೇಶಕ ಅಭಿಮನ್ಯು ಹಾಗೂ ಸಿದ್ಧಾರ್ಥ ಭೂಪತಿಯನ್ನು ಅಗಲಿದ್ದಾರೆ
1985ರಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಿ ಜಯ ಗಳಿಸಿದ್ದರು. ಹಾಲಿ ಕೆಪಿಸಿಸಿಯ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದರು.