ರಾಮ್ ನಾಥ್ ಕೋವಿಂದ್ 
ಪ್ರಧಾನ ಸುದ್ದಿ

ಕೋವಿಂದ್ ಅವರಿಗೆ ಬೆಂಬಲ ಘೋಷಿಸಲಿರುವ ಜೆಡಿಯು: ಶಾಸಕ

ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ಅವರಿಗೆ ಬೆಂಬಲ ನೀಡಲು ಬಿಹಾರದ ಆಡಳಿತ ಪಕ್ಷ ಸಂಯುಕ್ತ ಜನತಾ ದಳ ನಿರ್ಧರಿಸಿದೆ ಎಂದು ಜೆಡಿಯು ಶಾಸಕ ರತ್ನೇಶ್ ಸಾದಾ ಬುಧವಾರ

ಪಾಟ್ನಾ: ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ಅವರಿಗೆ ಬೆಂಬಲ ನೀಡಲು ಬಿಹಾರದ ಆಡಳಿತ ಪಕ್ಷ ಸಂಯುಕ್ತ ಜನತಾ ದಳ ನಿರ್ಧರಿಸಿದೆ ಎಂದು ಜೆಡಿಯು ಶಾಸಕ ರತ್ನೇಶ್ ಸಾದಾ ಬುಧವಾರ ಹೇಳಿದ್ದಾರೆ. 
ಸಾಂಬಾರ್ಷ ಕ್ಷೇತ್ರವನ್ನು ಪ್ರತಿನಿಧಿಸುವ ಸಾದಾ "ಕೋವಿಂದ್ ಅವರಿಗೆ ಬೆಂಬಲ ನೀಡಲು ಪಕ್ಷ ನಿರ್ಧರಿಸಿದೆ. ಶಾಸಕರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ" ಎಂದು ತಿಳಿಸಿದ್ದಾರೆ. 
ನೆರೆದಿದ್ದ ಶಾಸಕರಿಗೆ "ಕೋವಿಂದ್ ಒಳ್ಳೆಯ ಮನುಷ್ಯ" ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದ್ದಾಗಿ ಸಾದಾ ಹೇಳಿದ್ದಾರೆ. 
ಶಾಸಕರ ಜೊತೆಗೆ ಇನ್ನಷ್ಟು ಸುತ್ತಿನ ಮಾತುಕತೆಗಳು ನಡೆಯಲಿದ್ದು, ಬುಧವಾರ ತಡವಾಗಿ ಅಥವಾ ಗುರುವಾರ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ. 
ನಿತೀಶ್ ಕುಮಾರ್ ಅವರ ನಿರ್ಧಾರಕ್ಕೆ ಒಮ್ಮತವಾಗಿ ಒಪ್ಪಿಕೊಳ್ಳುವುದಾಗಿ ಶಾಸಕರು ಹೇಳಿರುವುದಾಗಿ ಕೂಡ ಸಾದಾ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!