ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಮೇಘಾಲಯದಲ್ಲಿ ಪೊಲೀಸ್ ಠಾಣೆಯನ್ನು ಸುಟ್ಟುಹಾಕಿದ ಗುಂಪು

ಮೇಘಾಲಯದ ಉತ್ತರ ಗಾರೋ ಹಿಲ್ಸ್ ಜಿಲ್ಲೆಯ ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದ ಗುಂಪು ಅದಕ್ಕೆ ಬೆಂಕಿ ಹಚ್ಚಿ ಸುಟ್ಟುಹಾಕಿದೆ. ಪೊಲೀಸ್ ಗುಂಡಿನ ದಾಳಿಯಲ್ಲಿ ಮೂವರಿಗೆ ಗಾಯಗಳಾಗಿವೆ ಎಂದು

ಶಿಲ್ಲಾಂಗ್: ಮೇಘಾಲಯದ ಉತ್ತರ ಗಾರೋ ಹಿಲ್ಸ್ ಜಿಲ್ಲೆಯ ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದ ಗುಂಪು ಅದಕ್ಕೆ ಬೆಂಕಿ ಹಚ್ಚಿ ಸುಟ್ಟುಹಾಕಿದೆ. ಪೊಲೀಸ್ ಗುಂಡಿನ ದಾಳಿಯಲ್ಲಿ ಮೂವರಿಗೆ ಗಾಯಗಳಾಗಿವೆ ಎಂದು ಮಂಗಳವಾರ ಅಧಿಕಾರಿಯೊಬ್ಬರು ಹೇಳಿದ್ದಾರೆ. 
ಸೋಮವಾರ ರಾತ್ರಿ ಕಾಲ್ದಂಗ್ ಪ್ರದೇಶದಲ್ಲಿ ಬ್ಯಾರಿಕೇಡ್ ನಿರ್ಮಿಸಿದ್ದ ಪೊಲೀಸರು ಚಲಿಸುತ್ತಿದ್ದ ವಾಹನವೊಂದಕ್ಕೆ ತಪಾಸಣೆಗಾಗಿ ನಿಲ್ಲಿಸಲು ಸೂಚಿಸಿದಾಗ ಚಾಲಕ ನಿರಾಕರಿಸಿದ್ದರಿಂದ, ವಾಹನದತ್ತ ಪೊಲೀಸ್ ತಂಡ ಗುಂಡು ಹಾರಿಸಿದಾಗ ಹಿಂಸೆ ಪ್ರಾರಂಭವಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. 
"ಭಯೋತ್ಪಾದಕರ ಚಲನವಲನದ ಬಗ್ಗೆ ಮಾತಿಹಿ ಇರುವುದರಿಂದ ಕಳೆದ ಒಂದು ವಾರದಿಂದ ನಾವು ಜಿಲ್ಲೆಯಲ್ಲಿ ವಾಹನ ತಪಾಸಣೆ ಹೆಚ್ಚಿಸಿದ್ದೇವೆ" ಎಂದು ಮೇಘಾಲಯ ಪೊಲೀಸ್ ಮುಖ್ಯಸ್ಥ ಎಸ್ ಬಿ ಸಿಂಗ್ ಹೇಳಿದ್ದಾರೆ. 
ಈ ಗುಂಡಿನ ದಾಳಿಯ ನಂತರ ಜನರ ಗುಂಪು ರೇಸುಬೇಲ್ಪಾರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ಸುಟ್ಟುಹಾಕಿದೆ ಎಂದು ಸಿಂಗ್ ತಿಳಿಸಿದ್ದಾರೆ. ಜೊತೆಗೆ ಪೊಲೀಸ್ ವಾಹನಗಳಿಗೂ ಬೆಂಕಿ ಹಚ್ಚಲಾಗಿದೆ. 
ಈ ಘಟನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿರುವ ಸಿಂಗ್, ಸದ್ಯಕ್ಕೆ ಪರಿಸ್ಥಿತಿ ಹತೋಟಿಯಲ್ಲಿದ್ದು, ತೀವ್ರ ನಿಗಾ ವಹಿಸಲಾಗಿದೆ ಎಂದಿದ್ದಾರೆ. 
ಗಾಯಗೊಂಡ ಮೂವರನ್ನು ಅಸ್ಸಾಮಿನ ಗೌಹಾಟಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಒಬ್ಬನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಯಲಾಗಿದೆ. 
ಅಪಹರಣ ಮತ್ತು ಬೆದರಿಕೆ ಆರೋಪಗಳಲ್ಲಿ ಮೇಘಾಲಯ ಪೊಲೀಸರಿಗೆ ಬೇಕಾಗಿರುವ ಅಪರಾಧಿ ವಿಲಿಯಮ್ ಎ ಸಂಗ್ಮಾ, ಸೋಮವಾರ ತಾಪ ದರೆಂಚಿ ಪೊಲೀಸ್ ಚೆಕ್ ಪಾಯಿಂಟ್ ಬಳಿಯಿಂದ ಕೂದಲೆಳೆಯ ಅಂತರದಲ್ಲಿ ತಪ್ಪಿಸಿಕೊಂಡಿದ್ದ. ಅವನು ತೊರೆದು ಹೋಗಿದ್ದ ವಾಹನದಿಂದ ಪೊಲೀಸರು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲು ಯಶಸ್ವಿಯಾಗಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!