ನಾರಾ ಲೋಕೇಶ್ 
ಪ್ರಧಾನ ಸುದ್ದಿ

ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಪುತ್ರ ನಾರಾ ಲೋಕೇಶ್ ಎಂಎಲ್ ಸಿಯಾಗಿ ಆಯ್ಕೆ

ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್,ಚಂದ್ರಬಾಬು ನಾಯ್ಡು ಅವರ ಪುತ್ರ ನಾರಾ ಲೋಕೇಶ್ ಅವರು ಬುಧವಾರ ವಿಧಾನಸಭೆ....

ವಿಜಯವಾಡ: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್,ಚಂದ್ರಬಾಬು ನಾಯ್ಡು ಅವರ ಪುತ್ರ ನಾರಾ ಲೋಕೇಶ್ ಅವರು ಬುಧವಾರ ವಿಧಾನಸಭೆ ಸದಸ್ಯರಿಂದ ವಿಧಾನ ಪರಿಷತ್ ಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚಂದ್ರಬಾಬು ನಾಯ್ಡು ಅವರು ಪುತ್ರನನ್ನು ತಮ್ಮ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಉದ್ದೇಶದಿಂದ ಇಂದು ನಾರಾ ಲೋಕೇಶ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಿದ್ದು, ಬಜೆಟ್ ಅಧಿವೇಶನದ ನಂತರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
ನಾರಾ ಲೋಕೇಶ್ ಸೇರಿದಂತೆ ಏಳು ಮಂದಿ ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಅವರೋಧವಾಗಿ ಆಯ್ಕೆಯಾಗಿದ್ದು, ಟಿಡಿಪಿಯಿಂದ ಲೋಕೇಶ್ ಸೇರಿದಂತೆ ಐವರು ಹಾಗೂ ವೈಎಸ್ ಆರ್ ಕಾಂಗ್ರೆಸ್ ನ ಇಬ್ಬರು ಸದಸ್ಯರು ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ಘೋಷಿಸಿದ್ದಾರೆ.
ಆಂಧ್ರ ವಿಧಾನ ಪರಿಷತ್ ಚುನಾವಣೆ ಮಾರ್ಚ್ 20ರಂದು ನಿಗದಿಯಾಗಿತ್ತು. ಆದರೆ ಆಡಳಿತ ಮತ್ತು ಪ್ರತಿಪಕ್ಷಗಳು ತಲಾ ಐದು ಮತ್ತು ಎರಡು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರು, ಎಲ್ಲಾ ಏಳು ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ