ನವದೆಹಲಿ: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜೆ.ಜಯಲಲಿತಾ ಅವರು ಪ್ರತಿನಿಧಿಸುತ್ತಿದ್ದ ಚೆನ್ನೈನ ಆರ್.ಕೆ.ನಗರ ಸೇರಿದಂತೆ ವಿವಿಧ ರಾಜ್ಯಗಳ 12 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ ಮೂರು ಲೋಕಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ಗುರುವಾರ ಉಪ ಚುನಾವಣೆಯ ದಿನಾಂಕ ಪ್ರಕಟಿಸಿದೆ.
ಜಯಲಲಿತಾ ನಿಧನದಿಂದ ತೆರವಾದ ತಮಿಳುನಾಡಿನ ಆರ್ ಕೆ ನಗರ ವಿಧಾನಸಭೆಗೆ ಏಪ್ರಿಲ್ 12ರಂದು ಉಪ ಚುನಾವಣೆ ನಡೆಯಲಿದೆ. ಇನ್ನು ಕರ್ನಾಟಕದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರ ರಾಜಿನಾಮೆಯಿಂದ ತೆರವಾದ ನಂಜನಗೂಡು ಹಾಗೂ ಮಹದೇವ ಪ್ರಸಾದ್ ನಿಧನದಿಂದ ತೆರವಾದ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ಸೇರಿದಂತೆ 11 ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಉಪ ಚುನಾವಣೆ ನಡೆಯಲಿದೆ.
ಇನ್ನು ಶ್ರೀನಗರ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 9ರಂದು ಉಪ ಚುನಾವಣೆ ನಡೆದರೆ, ಅನಂತನಾಗ್ ಲೋಕಸಭಾ ಕ್ಷೇತ್ರ ಹಾಗೂ ಕೇರಳದ ಮಲಪುರಂ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 12ರಂದು ಉಪ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.