ನವದೆಹಲಿ: ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ನಂತರ 125 ಕೋಟಿ ಭಾರತೀಯರ ಶಕ್ತಿ ಮತ್ತು ಕೌಶಲ್ಯಗಳ ಬಲದಿಂದ ‘ನವ ಭಾರತ’ಉದಯಿಸುತ್ತಿದ್ದು, ‘ನವ ಭಾರತ’ ಅಭಿವೃದ್ಧಿಯ ಪರ ನಿಲ್ಲಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್ ಮಾಡಿದ್ದಾರೆ.
ಭಾರತ 2022ರಲ್ಲಿ 75ನೇ ಸ್ವಾತಂತ್ರ್ಯೊತ್ಸವ ಆಚರಿಸಲಿದ್ದು, ಈ ಸಂದರ್ಭದಲ್ಲಿ ನಾವು ಮಹಾತ್ಮಾ ಗಾಂಧೀಜಿ, ಸರ್ದಾರ್ ಪಟೇಲ್ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ಅವರು ಹೆಮ್ಮೆ ಪಡುವಂತೆ ದೇಶವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಬೇಕಿದೆ ಎಂದು ಮೋದಿ ಮತ್ತೊಂದು ಟ್ವಿಟ್ನಲ್ಲಿ ಹೇಳಿದ್ದಾರೆ.
ಇನ್ನು ನವ ಭಾರತ ನಿರ್ಮಾಣಕ್ಕಾಗಿ ಪ್ರಧಾನಿ ಮೋದಿ ಅವರು #IAmNewIndia, ನಮೋ ಆಪ್ ಅನ್ನು ಬಿಡುಗಡೆ ಮಾಡಿದ್ದಾರೆ.