ಮಂಗಳವಾರ ಬಜೆಟ್ ಸಿದ್ದತೆಯಲ್ಲಿ ತೊಡೆಗಿದ್ದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದಿಂದ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗೀನಿಂದಲೇ ಮುಂದಿನ ವರ್ಷ ನಡೆಯುವ ರಾಜ್ಯ ವಿಧಾನಸಭೆ ಚುನಾವಣೆ ಹಾಗೂ ಮುಂದಿನ ತಿಂಗಳು ನಡೆಯಲಿರುವ ಉಪ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನಾಳೆ ರೈತರ ಸಾಲ ಮನ್ನಾ ಸೇರಿದಂತೆ ಜನಪ್ರಿಯ ಬಜೆಟ್ ಮಂಡಿಸುವ ಸಾಧ್ಯತೆ ಇದೆ.
ಸಿದ್ದರಾಮಯ್ಯ ಅವರು ನಾಳೆ ಬೆಳಗ್ಗೆ 11.30ಕ್ಕೆ ತಮ್ಮ 12ನೇ ಬಜೆಟ್ ಮಂಡಿಸುತ್ತಿದ್ದು, ಇದೇ ಮೊದಲ ಬಾರಿಗೆ ಬಜೆಟ್ ಗಾತ್ರ ಎರಡು ಲಕ್ಷ ಕೋಟಿ ದಾಟುವ ಸಾಧ್ಯತೆ ಇದೆ.
ಪಂಚರಾಜ್ಯಗಳ ಚುನಾವಣೆಯಲ್ಲಿ ಪಂಜಾಬ್ ಹೊರತುಪಡಿಸಿ ಬೇರೆ ರಾಜ್ಯಗಳಲ್ಲಿ ಕಾಂಗ್ರೆಸ್ ಗದ್ದುಗೆ ಏರಲು ಸಾಧ್ಯವಾಗಿಲ್ಲ. ಹೀಗಾಗಿ, ಕೈಯಲ್ಲಿರುವ ದೊಡ್ಡ ರಾಜ್ಯ ಕರ್ನಾಟಕವಾಗಿದ್ದು, ಇಲ್ಲಿ ಅಧಿಕಾರ ಉಳಿಸಿಕೊಳ್ಳುವ ಒತ್ತಡದಲ್ಲಿರುವ ಸಿಎಂ, ಜನರ ಓಲೈಕೆಗೆ ಮುಂದಾಗುವ ಎಲ್ಲ ಸಾಧ್ಯತೆ ಇದೆ.
ಸಹಕಾರಿ ಬ್ಯಾಂಕ್ ಗಳಲ್ಲಿರುವ ರೈತರ ಸಾಲ ಮನ್ನಾ ಸಾಧ್ಯತೆ
ತೀವ್ರ ಬರಗಾಲದ ಹಿನ್ನೆಲೆಯಲ್ಲಿ ರಾಜ್ಯದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಸಹಕಾರ ಬ್ಯಾಂಕ್`ಗಳಲ್ಲಿರುವ ರೈತರ ಸಾಲನ್ನು ಅರ್ಧದಷ್ಟು ಮನ್ನಾ ಮಾಡುವ ಸಾಧ್ಯತೆ ಇದೆ. ಸಹಕಾರ ವಲಯದಲ್ಲಿ 22.25 ಲಕ್ಷ ರೈತರು 10500 ಕೋಟಿ ರೂ. ಸಾಲ ಮಾಡಿದ್ದು, ರಾಷ್ಟ್ರೀಕೃತ ಹಾಗೂ ವಾಣಿಜ್ಯ ಬ್ಯಾಂಕ್‌ಗಳಲ್ಲಿ 33 ಲಕ್ಷ ರೈತರು 42000 ಕೋಟಿ ರೂ. ಸಾಲ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics