ಪಣಜಿ: ಮಾಜಿ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಮಂಗಳವಾರ ನಾಲ್ಕನೆ ಬಾರಿ ಗೋವಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇಂದು ರಾಜಭನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪರಿಕ್ಕರ್ ಅವರಿಗೆ ರಾಜ್ಯಪಾಲ ಮೃದಲಾ ಸಿನ್ಹಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಪರಿಕ್ಕರ್ ಅವರೊಂದಿಗೆ ಬಿಜೆಪಿ ಐವರು ಹಾಗೂ ಸರ್ಕಾರಕ್ಕೆ ಬೆಂಬಲ ನೀಡಿದ ಗೋವಾ ಪಾರ್ವರ್ಡ್ ಪಕ್ಷ ಹಾಗೂ ಮಹಾರಾಷ್ಟ್ರವಾದಿ ಗೋಮಾಂತಕ ಪಕ್ಷದ ಆರು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಸಮಾರಂಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ವೆಂಕಯ್ಯ ನಾಯ್ಡು, ನಿತಿನ್ ಗಡ್ಕರಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.