ಪ್ರಧಾನ ಸುದ್ದಿ

ರಾಮ ಮಂದಿರ ವಿವಾದ: ಲಿಖಿತ ಉತ್ತರ ನೀಡುವಂತೆ ಬಣಗಳಿಗೆ "ಸುಪ್ರೀಂ" ಸೂಚನೆ!

Srinivasamurthy VN

ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ ವಿವಾದ ಸಂಬಂಧ ಸಂಧಾನ ಪ್ರಕ್ರಿಯೆಗೆ ಮುಂದಾಗಿರುವ ಸುಪ್ರೀಂ ಕೋರ್ಟ್ ಬಣಗಳಿಗೆ ತನ್ನ ಅಭಿಪ್ರಾಯವನ್ನು ಲಿಖಿತ ರೂಪದಲ್ಲಿ ಉತ್ತರಿಸುವಂತೆ ಸೂಚನೆ ನೀಡಿ, ವಿಚಾರಣೆಯನ್ನು 2 ವಾರಗಳ ಕಾಲ ಮುಂದೂಡಿದೆ.

ರಾಮ ಮಂದಿರ ವಿವಾದ ಸಂಬಂಧ ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಆರ್ ಎಸ್ ನಾರಿಮನ್ ನೇತೃತ್ವದ ಪೀಠ ಎಲ್ಲ ಬಣಗಳು ವಿವಾದ ಸಂಬಂಧ ಮತ್ತು ಸಂಧಾನಕ್ಕೆ ಸಂಬಂಧಿಸಿದಂತೆ ತನ್ನ  ಅಭಿಪ್ರಾಯವನ್ನು ಲಿಖಿತ ರೂಪದಲ್ಲಿ ನೀಡುವಂತೆ ಆದೇಶಿಸಿದೆ. ಅಲ್ಲದೆ ವಿಚಾರಣೆಯನ್ನು ಮತ್ತೆ 2 ವಾರಗಳ ಕಾಲ ಮೂಂದೂಡಿದೆ.

ಈ ಹಿಂದೆ ನಡೆದ ವಿಚಾರಣೆಯಲ್ಲಿ  ರಾಮ ಮಂದಿರ ವಿವಾದ ಧಾರ್ಮಿಕ ಮತ್ತು ಭಾವನಾತ್ಮಕ ವಿಚಾರವಾಗಿದ್ದು, ಪರಸ್ಪರ ಸಂಧಾನದ ಮೂಲಕ ನ್ಯಾಯಾಲಯದ ಹೊರಗೆ ಬಗೆಹರಿಸಿಕೊಳ್ಳುವಂತೆ ಸಲಹೆ ನೀಡಿತ್ತು. ಅಲ್ಲದೆ ಎಲ್ಲ  ಬಣಗಳೂ ಒಪ್ಪುವುದಾದರೆ ತನ್ನ ನೇತೃತ್ವದಲ್ಲಿ ಸಂಧಾನ ನಡೆಸಲೂ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿತ್ತು. ಹೀಗಾಗಿ ಉಭಯ ಬಣಗಳ ಮುಖಂಡರು ಸಂಧಾನಕ್ಕೆ ಒಪ್ಪಿದರೆ ಮಾತ್ರ ಸುಪ್ರೀಂ ಕೋರ್ಟ್ ಸಂಧಾನಕಾರನ ಪಾತ್ರ  ವಹಿಸಲು ಸಿದ್ಧವಾಗಿದೆ.

ಅಂತೆಯೇ ಬಿಜೆಪಿ ಪಕ್ಷದ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಸೇರಿದಂತೆ ವಿವಿಧ ಮುಖಂಡರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್  ನಡೆಸಲಿದೆ.

ಬಿಜೆಪಿ ಮುಖಂಡರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾ ಭಾರತಿ ಸೇರಿದಂತೆ 13 ಮುಖಂಡರ ವಿರುದ್ಧದ ಆರೋಪಗಳನ್ನು ಕೈ ಬಿಟ್ಟ ವಿಚರಣಾಧೀನ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ  ಅಧಿಕಾರಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಲಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಆರ್ ಎಸ್ ನಾರಿಮನ್ ನೇತೃತ್ವದ ಪೀಠ ಇಂದು ಪ್ರಕರಣದ ವಿಚಾರಣೆ ನಡೆಸಿ  13 ಮಂದಿ ಮುಖಂಡರ ವಿರುದ್ಧ ಆರೋಪಗಳನ್ನು ಕೈಬಿಟ್ಟ ವಿಚಾರ ತಮ್ಮ ವ್ಯಾಪ್ತಿಗೆ ಬರುವುದಿಲ್ಲ. ಆದರೂ ಪ್ರಕರಣದ ವಿಚಾರಣೆಯನ್ನು ನಡೆಸುವುದಾಗಿ ಹೇಳಿದ್ದರು.

SCROLL FOR NEXT