ರಾಷ್ಟ್ರಪತಿ ಪ್ರಣಬ್ ಮುಖರ್ಜಿ 
ಪ್ರಧಾನ ಸುದ್ದಿ

ವಿಶ್ವ ಸಮುದಾಯದ ಸಾಮೂಹಿಕ ಕ್ರಮಗಳಿಂದ ಮಾತ್ರ ಭಯೋತ್ಪಾದನೆ ನಿಗ್ರಹ ಸಾಧ್ಯ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ಬ್ರಿಟನ್ ಸಂಸತ್ ಭವನ ಬಳಿ ನಡೆದ ಉಗ್ರ ದಾಳಿ ಪ್ರಕರಣವನ್ನು ಕಟು ಶಬ್ದಗಳಿಂದ ಟೀಕಿಸಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು, ವಿಶ್ವ ಸಮುದಾಯದ ಸಾಮೂಹಿಕ ಕ್ರಮಗಳಿಂದ ಮಾತ್ರ ಭಯೋತ್ಪಾದನೆ ನಿಗ್ರಹ ಸಾಧ್ಯ ಎಂದು ಹೇಳಿದ್ದಾರೆ.

ನವದೆಹಲಿ: ಬ್ರಿಟನ್ ಸಂಸತ್ ಭವನ ಬಳಿ ನಡೆದ ಉಗ್ರ ದಾಳಿ ಪ್ರಕರಣವನ್ನು ಕಟು ಶಬ್ದಗಳಿಂದ ಟೀಕಿಸಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು, ವಿಶ್ವ ಸಮುದಾಯದ ಸಾಮೂಹಿಕ ಕ್ರಮಗಳಿಂದ ಮಾತ್ರ ಭಯೋತ್ಪಾದನೆ  ನಿಗ್ರಹ ಸಾಧ್ಯ ಎಂದು ಹೇಳಿದ್ದಾರೆ.

ಟ್ವಿಟರ್ ನಲ್ಲಿ ಲಂಡನ್ ಉಗ್ರ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು, ಬ್ರಿಟನ್ ಸರ್ಕಾರದೊಂದಿಗೆ ಭಾರತ ಬೆಂಬಲವಾಗಿರಲಿದೆ. ವಿಶ್ವ ಸಮುದಾಯ ಸಾಮೂಹಿಕವಾಗಿ ಹೋರಾಡಿದರೆ ಮಾತ್ರ  ಭಯೋತ್ಪಾದನೆಯನ್ನು ಬುಡಸಹಿತ ಕಿತ್ತೆಸೆಯಬಹುದು. ಇದಕ್ಕಾಗಿ ವಿಶ್ವ ಸಮುದಾಯದ ಸಾಮೂಹಿಕ ಕ್ರಮಗಳು ಅತ್ಯಗತ್ಯ ಎಂದು ಹೇಳಿದ್ದಾರೆ.

ಲಂಡನ್ ಸಂಸತ್ ಭವನದ ಬಳಿ ಉಗ್ರ ದಾಳಿ ನಡೆದ ಕುರಿತು ಮಾಹಿತಿ ಕೇಳಿ ನಿಜಕ್ಕೂ ಆಘಾತವಾಯಿತು. ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರಿಗೆ ಸಂತಾಪ ಸೂಚಿಸುತ್ತೇನೆ ಎಂದು ಪ್ರಣಬ್ ಮುಖರ್ಜಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT