ಪ್ರಧಾನ ಸುದ್ದಿ

ಈ ಬಾರಿ 103 ನಗರಗಳಲ್ಲಿ ನೀಟ್ ಪರೀಕ್ಷೆ: ಸಚಿವ ಪ್ರಕಾಶ್ ಜಾವಡೆಕರ್

Lingaraj Badiger
ನವದೆಹಲಿ: ಈ ಬಾರಿ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್) ನಡೆಯುವ ನಗರಗಳ ಸಂಖ್ಯೆಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿದ್ದು, ದೇಶದ ಒಟ್ಟು 103 ನಗರಗಳಲ್ಲಿ ಈ ಬಾರಿ ನೀಟ್ ಪರೀಕ್ಷೆ ಆಯೋಜಿಸಲಾಗುತ್ತಿದೆ. 
ಪರೀಕ್ಷೆ ಬರೆಯಲಿರುವ ಸುಮಾರು 12 ಲಕ್ಷ ವಿದ್ಯಾರ್ಥಿಗಳಿಗೆ ಸಹಾಯವಾಗಲಿ ಎಂಬ ಉದ್ದೇಶದಿಂದ ಪರೀಕ್ಷೆ ನಡೆಯುವ ನಗರಗಳ ಸಂಖ್ಯೆಯನ್ನು 80ರಿಂದ 103ಕ್ಕೆ ಹೆಚ್ಚಿಸಲಾಗಿದೆ ಮತ್ತು ಪರೀಕ್ಷಾ ಕೇಂದ್ರವನ್ನು ಪತ್ತೆ ಹಚ್ಚಲು ಮೊಬೈಲ್ ಆಪ್ ಅನ್ನು ಸಹ ಅಭಿವೃದ್ಧಿಪಡಿಸಲಾಗಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೆಕರ್ ಅವರು ಇಂದು ಸಂಸತ್ತಿನ ಹೊರಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ.
ನೀಟ್ ಪರೀಕ್ಷೆ ವೈದ್ಯಕೀಯ ಪ್ರವೇಶ ಪರೀಕ್ಷೆಯಾಗಿದ್ದು, ಇದನ್ನು ಸಿಬಿಎಸ್ ಇ ಆಯೋಜಿಸುತ್ತಿದೆ. ಇದಕ್ಕೆ ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿರುವುದರಿಂದ ಈ ಬಾರ ಪರೀಕ್ಷೆ ನಡೆಯುವ ನಗರಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಕಳೆದ ವರ್ಷ 8 ಲಕ್ಷ ಅಭ್ಯರ್ಥಿಗಳು ನೀಟ್ ಪರೀಕ್ಷೆ ಬರೆದಿದ್ದರು. ಆದರೆ ಈ ಬಾರಿ ಸುಮಾರು 12 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯುವ ಸಾಧ್ಯತೆ ಇದೆ ಎಂದು ಜಾವಡೆಕರ್ ಅವರು ಮಾಹಿತಿ ನೀಡಿದ್ದಾರೆ.
SCROLL FOR NEXT