ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ತಮಿಳುನಾಡಿಗೆ ಕಾವೇರಿ ನೀರು ಬಿಡುವ ಪ್ರಶ್ನೆಯೇ ಇಲ್ಲ: ಕರ್ನಾಟಕ ಸರ್ಕಾರ

ಇತ್ತೀಚಿಗಷ್ಟೇ ಸುಪ್ರೀಂ ಕೋರ್ಟ್ ತಮಿಳುನಾಡಿಗೆ ನಿತ್ಯ 2 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದೆ.

ಸಾಂದರ್ಭಿಕ ಚಿತ್ರ
Lingaraj Badiger
Updated On : 25 Mar 2017, 10:27 am
ಬೆಂಗಳೂರು: ಇತ್ತೀಚಿಗಷ್ಟೇ ಸುಪ್ರೀಂ ಕೋರ್ಟ್ ತಮಿಳುನಾಡಿಗೆ ನಿತ್ಯ 2 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದೆ. ಆದರೆ ನಮ್ಮಲ್ಲಿಯೇ ಕುಡಿಯುವ ನೀರಿನ ಸಮಸ್ಯೆ ಇರುವುದರಿಂದ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಶುಕ್ರವಾರ ಸ್ಪಷ್ಟಪಡಿಸಿದೆ.
ಇಂದು ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು, ರಾಜ್ಯದಲ್ಲಿ ಕುಡಿಯುವ ನೀರಿನ ಕೊರತೆ ಇದೆ. ಒಂದು ವೇಳೆ ನಮ್ಮ ಡ್ಯಾಂಗಳಲ್ಲಿ ನೀರಿದ್ದರೆ ಖಂಡಿತ ನಾವು ನೀರು ಬಿಡುತ್ತಿದ್ದೇವು. ಆದರೆ ಬೆಂಗಳೂರು, ಮೈಸೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ 3ರಿಂದ 4 ಟಿಎಂಸಿ ಕುಡಿಯುವ ನೀರಿನ ಕೊರತೆ ಇದೆ. ಹೀಗಾಗಿ ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಪಾಟೀಲ್, ನಮ್ಮ ಡ್ಯಾಂಗಳಲ್ಲಿ ನೀರಿಲ್ಲದಿರುವ ವಿಚಾರವನ್ನು ನಾವು ಈಗಾಗಲೇ ಸುಪ್ರೀಂ ಕೋರ್ಟ್ ಗಮನಕ್ಕೆ ತಂದಿದ್ದೇವೆ ಎಂದರು.

Advertisement

Advertisement

ಮಾರ್ಚ್ 21ರಂದು ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸುಪ್ರೀಂ ಪೀಠ, ಮಧ್ಯಂತರ ಆದೇಶದಂತೆ ಮುಂದಿನ ಆದೇಶದವರೆಗೆ ತಮಿಳುನಾಡಿಗೆ ನಿತ್ಯ 2 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಬಿಡುವಂತೆ ಕರ್ನಾಕಟ ಸರ್ಕಾರಕ್ಕೆ ಸೂಚಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement