ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಬಿಜೆಪಿ ಪಕ್ಷ ಸೇರಿದ ಎಎಪಿ ಶಾಸಕ ವೇದ್ ಪ್ರಕಾಶ್

ಏಪ್ರಿಲ್ ೨೩ ರಂದು ನಡೆಯಲಿರುವ ನಗರಸಭಾ ಚುನಾವಣೆಯಲ್ಲಿ ಆಡಳಿತ ಆಮ್ ಆದ್ಮಿ ಪಕ್ಷಕ್ಕೆ ಹಿನ್ನಡೆಯಾಗುವ ನಡೆಯಲ್ಲಿ ಎಎಪಿ ಶಾಸಕ ವೇದ್ ಪ್ರಕಾಶ್ ಪಕ್ಷ ತೊರೆದು ಸೋಮವಾರ ಭಾರತೀಯ

ನವದೆಹಲಿ: ಏಪ್ರಿಲ್ ೨೩ ರಂದು ನಡೆಯಲಿರುವ ನಗರಸಭಾ ಚುನಾವಣೆಯಲ್ಲಿ ಆಡಳಿತ ಆಮ್ ಆದ್ಮಿ ಪಕ್ಷಕ್ಕೆ ಹಿನ್ನಡೆಯಾಗುವ ನಡೆಯಲ್ಲಿ ಎಎಪಿ ಶಾಸಕ ವೇದ್ ಪ್ರಕಾಶ್ ಪಕ್ಷ ತೊರೆದು ಸೋಮವಾರ ಭಾರತೀಯ ಜನತಾ ಪಕ್ಷ ಸೇರುತ್ತಿರುವುದಾಗಿ ಘೋಷಿಸಿದ್ದಾರೆ. 
ಎಎಪಿಯಲ್ಲಿ ಆತಂತರಿಕ ಪ್ರಜಾಪ್ರಭುತ್ವ ಇಲ್ಲ ಎಂದು ದೂರಿರುವ ಭವಾನದ ಶಾಸಕ, ೨೦೧೫ ರಲ್ಲಿ ವಿಧಾನಸಭಾ ಚುನಾವಣೆ ಗೆಲ್ಲುವ ಮೊದಲು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೀಡಿದ್ದ ಭರವಸೆಗಳನ್ನು ಪೂರೈಸಲು ವಿಫಲರಾಗಿದ್ದಾರೆ ಎಂದು ಕೂಡ ಅವರು ಆರೋಪಿಸಿದ್ದಾರೆ. 
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಸೇರುವ ತಮ್ಮ ನಿರ್ಧಾರವನ್ನು ಪ್ರಕಾಶ್ ಪ್ರಕಟಿಸಿದ್ದಾರೆ. ಈ ಸಭೆಯಲ್ಲಿ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಕೂಡ ಉಪಸ್ಥಿತರಿದ್ದರು. 
ಉತ್ತರ, ಪೂರ್ವ ಮತ್ತು ದಕ್ಷಿಣ ದೆಹಲಿಯ ೨೭೨ ವಾರ್ಡ್ ಗಳ ಮುನ್ಸಿಪಲ್ ಚುನಾವಣೆ ಏಪ್ರಿಲ್ ೨೩ ಕ್ಕೆ ನಡೆಯಲಿದ್ದು, ಏಪ್ರಿಲ್ ೨೫ ಕ್ಕೆ ಫಲಿತಾಂಶ ಹೊರಬೀಳಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ