ಸಂಗ್ರಹ ಚಿತ್ರ 
ಪ್ರಧಾನ ಸುದ್ದಿ

ಸಿಜೆಐಗೆ ಶಿಕ್ಷೆ ವಿಧಿಸಿದ್ದ ನ್ಯಾ.ಕರ್ಣನ್ ಗೆ 6 ತಿಂಗಳ ಜೈಲುಶಿಕ್ಷೆ ವಿಧಿಸಿದ ಸುಪ್ರೀಂ ಕೋರ್ಟ್!

ದೇಶದಲ್ಲೇ ಮೊದಲು ಎಂಬಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಶಿಕ್ಷೆ ವಿಧಿಸಿ ಅಚ್ಚರಿಗೆ ಕಾರಣವಾಗಿದ್ದ ನ್ಯಾಯಮೂರ್ತಿ ಸಿಎಸ್ ಕರ್ಣನ್ ಅವರಿಗೆ ಸುಪ್ರೀಂ ಕೋರ್ಟ್ ತಿಂಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ನವದೆಹಲಿ: ದೇಶದಲ್ಲೇ ಮೊದಲು ಎಂಬಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಶಿಕ್ಷೆ ವಿಧಿಸಿ ಅಚ್ಚರಿಗೆ ಕಾರಣವಾಗಿದ್ದ ನ್ಯಾಯಮೂರ್ತಿ ಸಿಎಸ್ ಕರ್ಣನ್  ಅವರಿಗೆ ಸುಪ್ರೀಂ ಕೋರ್ಟ್ ತಿಂಗಳ ಜೈಲ ಶಿಕ್ಷೆ ವಿಧಿಸಿ  ಆದೇಶ ಹೊರಡಿಸಿದೆ.

ಈಗಾಗಲೇ ಸುಪ್ರೀಂ ಕೋರ್ಟ್ ನಿಂದ ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಕೋಲ್ಕತಾ ಹೈಕೋರ್ಟ್ ನ್ಯಾಯಮೂರ್ತಿ ಸಿಎಸ್ ಕರ್ಣನ್ ಅವರು, ನಿನ್ನೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆಎಸ್ ಖೆಹರ್  ಹಾಗೂ ಇತರೆ 7 ಮಂದಿ ನ್ಯಾಯಾಧೀಶರಿಗೆ ಐದು ವರ್ಷ ಕಠಿಣ ಸಜೆ ಮತ್ತು 1 ಲಕ್ಷ ರು.ದಂಡ ವಿಧಿಸಿ ಸುಪ್ರೀಂಕೋರ್ಟ್ ನ ಕೆಂಗಣ್ಣಿಗೆ ತುತ್ತಾಗಿದ್ದರು. ಅದರ ಪರಿಣಾಮ ಎಂಬಂತೆ ಇದೀಗ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಕರ್ಣನ್ ಅವರಿಗೆ 6 ತಿಂಗಳ ಸೆರೆವಾಸ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ.

ನ್ಯಾಯಾಂಗ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರದ ಕುರಿತಂತೆ ಟೀಕೆ ಮಾಡಿ, ನ್ಯಾಯಾಧೀಶರ ಬಗ್ಗೆ ಟೀಕೆ ಮಾಡಿ ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಕೋಲ್ಕತಾ ಹೈಕೋರ್ಟ್ ನ್ಯಾಯಮೂರ್ತಿ ಸಿಎಸ್ ಕರ್ಣನ್ ನಿನ್ನೆಯಷ್ಟೇ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆಎಸ್ ಖೆಹರ್ ಹಾಗೂ ಇತರೆ 6 ಮಂದಿ ನ್ಯಾಯಾಧೀಶರಾದ ನ್ಯಾಯಮೂರ್ತಿ ದಿಪಾಕ್ ಮಿಶ್ರಾ, ನ್ಯಾಯಮೂರ್ತಿ ಜೆ. ಚೆಲಮೇಶ್ವರ್, ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾಯಮೂರ್ತಿ ಮದನ್ ಬಿ. ಲೋಕೂರ್, ಜಸ್ಟೀಸ್ ಪಿನಾಕಿ ಚಂದ್ರ ಘೋಶ್ ಮತ್ತು ಜಸ್ಟಿಸ್ ಕುರಿಯನ್ ಜೋಸೆಫ್ ಅವರ ವಿರುದ್ಧ ಎಸ್ಸಿ / ಎಸ್ಟಿ ದೌರ್ಜನ್ಯ ಕಾಯ್ದೆ 1989 ಮತ್ತು 2015 ರ ತಿದ್ದುಪಡಿ ಕಾಯಿದೆಯ ಅಡಿಯಲ್ಲಿ ಶಿಕ್ಷೆ ವಿಧಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT