ಪ್ರಧಾನ ಸುದ್ದಿ

ಮೃತ ಐಎಎಸ್ ಅಧಿಕಾರಿ ತಿವಾರಿ ಕರ್ನಾಟಕದಲ್ಲಿ ದೊಡ್ಡ ಹಗರಣ ಬಯಲಿಗೆಳೆಯಲಿದ್ದರು: ಉ.ಪ್ರದೇಶ ಸಚಿವ

Lingaraj Badiger
ಲಖನೌ: ಉತ್ತರ ಪ್ರದೇಶದಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಕರ್ನಾಟಕ ವೃಂದದ ಐಎಎಸ್‌ ಅಧಿಕಾರಿ ಅನುರಾಗ್‌ ತಿವಾರಿ (36) ಅವರು ಕಾಂಗ್ರೆಸ್ ನೇತೃತ್ವದ ಸರ್ಕಾರ ಸಾವಿರಾರು ಕೋಟಿ ರುಪಾಯಿ ಹಗರಣ ಬಯಲಿಗೆಳೆಯಲಿದ್ದರು ಎಂದು ಉತ್ತರ ಪ್ರದೇಶ ಸಚಿವ ಸುರೇಶ್ ಕುಮಾರ್ ಖನ್ನಾ ಅವರು ಗುರುವಾರ ವಿಧಾನಸಭೆಯಲ್ಲಿ ಹೇಳಿದ್ದಾರೆ.
ವಿಧಾಸಭೆಯಿಂದ ಕೇವಲ ಒಂದು ಕಿ.ಮೀ.ದೂರದಲ್ಲಿರುವ ಭಾರಿ ಭದ್ರತೆಯ ಹಜರತ್ ಗಂಜ್ ಪ್ರದೇಶದಲ್ಲೇ ಐಎಎಸ್ ಅಧಿಕಾರಿಯನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿ ಪ್ರತಿಪಕ್ಷಗಳು ಇಂದು ಉತ್ತರ ಪ್ರದೇಶ ವಿಧಾನಸಭೆಯಲ್ಲಿ ತೀವ್ರ ಗದ್ದಗ ಸೃಷ್ಟಿಸಿದವು.
ಪ್ರತಿಪಕ್ಷಗಳ ಆರೋಪಕ್ಕೆ ಸಂಸದೀಯ ಸಚಿವ ಸುರೇಶ್ ಕುಮಾರ್ ಖನ್ನಾ ಅವರು, ಅನುರಾಗ್ ತಿವಾರಿ ಅವರ ಮೃತದೇಹವನ್ನು ವಶಕ್ಕೆ ಪಡೆಯಲಾಗಿದೆ ಮತ್ತು ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದೆ. ಆದರೆ ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದರು. ಅಲ್ಲದೆ ಮೃತ ಐಎಎಸ್ ಅಧಿಕಾರಿ ಕರ್ನಾಟಕದಲ್ಲಿ ಒಂದು ದೊಡ್ಡ ಹಗರಣ ಬಯಲಿಗೆಳೆಯಲಿದ್ದರು ಎಂದು ಹೇಳಿದ್ದಾರೆ.
ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷಗಳಾದ ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಒಬ್ಬ ಐಎಎಸ್ ಅಧಿಕಾರಿಗೆ ರಾಜ್ಯದಲ್ಲಿ ರಕ್ಷಣೆ ಇಲ್ಲ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
SCROLL FOR NEXT