ಅನಿಲ್ ಮಹಾದೇವ್ ದವೆ 
ಪ್ರಧಾನ ಸುದ್ದಿ

ಕೇಂದ್ರ ಪರಿಸರ ಸಚಿವ ಅನಿಲ್ ಮಹದೇವ್ ದವೆ ನಿಧನ: ಆಘಾತ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ಕೇಂದ್ರ ಪರಿಸರ ಖಾತೆ ಸಚಿವ ಅನಿಲ್ ಮಹದೇವ್ ದವೆ(60) ನಿಧನರಾಗಿದ್ದಾರೆ. ಕಳೆದ ಕೆಲ ವಾರಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ...

ನವದೆಹಲಿ: ಕೇಂದ್ರ ಪರಿಸರ ಖಾತೆ ಸಚಿವ ಅನಿಲ್ ಮಹದೇವ್ ದವೆ(60) ನಿಧನರಾಗಿದ್ದಾರೆ. ಕಳೆದ ಕೆಲ ವಾರಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅನಿಲ್ ದವೆ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ಅನಿಲ್ ದವೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತ ಪಡಿಸಿದ್ದಾರೆ, ಅನಿಲ್ ದವೆ ಅವರ ನಿಧನದಿಂದ ನನಗೆ ವಯಕ್ತಿಕ ನಷ್ಟವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ, ನಿನ್ನೆ ಸಂಜೆಯವರೆಗೂ ನಾನು ಅವರ ಜೊತೆಗೆ ಇದ್ದೆ, ಆದರೆ ಅವರು ಈಗ ಇಲ್ಲ ಎಂದು ಆಘಾತ ವ್ಯಕ್ತ ಪಡಿಸಿದ್ದಾರೆ.ಪರಿಸರ ಸಂರಕ್ಷಣೆಯ ಬಗ್ಗೆ ಅಪಾರ ಒಲವು ಹೊಂದಿದ್ದ ಅನಿಲ್ ದವೆ ಜನಸೇವೆಯನ್ನೇ ಕಾಯಕವನ್ನಾಗಿಸಿಕೊಂಡಿದ್ದರು ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಆರ್ ಎಸ್ ಎಸ್ ನಲ್ಲಿ ಸಕ್ರಿಯರಾಗಿದ್ದ ಅನಿಲ್ ದವೆ ಅವರು ಕಳೆದ ವರ್ಷ ಪರಿಸರ ಸತಿವರಾಗಿ ಅಧಿಕಾರ ಸ್ವೀಕರಿಸಿದ್ದರು, ಮಧ್ಯಪ್ರದೇಶದಿಂದ ರಾಜ್ಯ ಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ