ಪ್ರಧಾನ ಸುದ್ದಿ

ಕುಲಭೂಷಣ್ ಜಾಧವ್ ಪ್ರಕರಣದ ತೀರ್ಪು ನಮ್ಮ ಪರವಾಗಲಿದೆ: ಕೇಂದ್ರ ಸರ್ಕಾರ ವಿಶ್ವಾಸ

Srinivasamurthy VN

ನವದೆಹಲಿ: ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿರುವ ಕುಲಭೂಷಣ್ ಜಾದವ್ ಪ್ರಕರಣದಲ್ಲಿ ತಮ್ಮ ಪರವಾದ ತೀರ್ಪು ಪ್ರಕಟವಾಗಲಿದೆ ಎಂದು ಕೇಂದ್ರ ಸರ್ಕಾರ ಗುರುವಾರ ವಿಶ್ವಾಸ ವ್ಯಕ್ತಪಡಿಸಿದೆ.

ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವಿನ ಭಿನ್ನಮತಕ್ಕೆ ಕಾರಣವಾಗಿರುವ ಕುಲಭೂಷಣ್ ಜಾದವ್ ಪ್ರಕರಣದ ತೀರ್ಪಿಗೆ ಕ್ಷಣಗಣನೆ ಆರಂಭವಾಗಿದ್ದು, ಇಂದು ಮಧ್ಯಾಹ್ನ 3.30ರ ವೇಳೆಗೆ ಪ್ರಕರಣದ ವಿಚಾರಣೆ ನಡೆಸುತ್ತಿರುವ  ಅಂತಾರಾಷ್ಟ್ರೀಯ ನ್ಯಾಯಾಲಯ ತನ್ನ ತೀರ್ಪು ಪ್ರಕಟ ಮಾಡಲಿದೆ. ಏತನ್ಮಧ್ಯೆ ಈ ಬಗ್ಗೆ ತೀರ್ಪು ತಮ್ಮ ಪರವಾಗಿಯೇ ಬರಲಿದೆ ಎಂದು ಕೇಂದ್ರ ಸರ್ಕಾರ ವಿಶ್ವಾಸ ವ್ಯಕ್ತಪಡಿಸಿದ್ದು, ಕುಲಭೂಷಣ್ ಜಾದವ್ ಪ್ರಕರಣದಲ್ಲಿ  ಪಾಕಿಸ್ತಾನದ ನಾಟಕ ಜಗತ್ತಿನ ಮುಂದೆ ಬರಲಿದೆ ಎಂದು ಹೇಳಿದೆ.

ಈ ಬಗ್ಗೆ ಮಾತನಾಡಿದ ಕೇಂದ್ರ ಸಚಿವ ಪಿಪಿ ಚೌದರಿ ಅವರು, ಅಂತಾರಾಷ್ಟ್ರೀಯ ನ್ಯಾಯಾಲಯ ಕುಲಭೂಷಣ್ ಜಾದವ್ ಪ್ರಕರಣದಲ್ಲಿ ನಮ್ಮ ಪರ ತೀರ್ಪು ನೀಡಲಿದೆ ಎಂಬ ವಿಶ್ವಾಸ ತಮಗಿದೆ ಎಂದು ಹೇಳಿದ್ದಾರೆ.

ಇನ್ನು ಇದೇ ವಿಚಾರವನ್ನು ಬಿಜೆಪಿ ಪಕ್ಷದ ಮುಖಂಡ ನಳಿನ್ ಕೊಹ್ಲಿ ಪುನರಾವರ್ತಿಸಿದ್ದು, ಕೇಂದ್ರ ಸರ್ಕಾರ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಉತ್ತಮವಾಗಿ ವಾದಿಸಿದ್ದು, ನ್ಯಾಯಾಲಯಕ್ಕೆ ಸತ್ಯಾಂಶವನ್ನು ತಿಳಿಸಿಕೊಡುವ  ಪ್ರಯತ್ನ ಮಾಡಿದೆ. ಕುಲಭೂಷಣ್ ಜಾದವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಪೂರಕ ಮಾಹಿತಿಗಳನ್ನು ಒದಗಿಸಿಲ್ಲ. ಹೀಗಾಗಿ ತೀರ್ಪು ನಮ್ಮ ಪರವಾಗಿಯೇ ಬರುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

ನೆದರ್ ಲ್ಯಾಂಡ್ ನ ಹೇಗ್ ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಂದು 3.30ರ ಹೊತ್ತಿಗೆ ಕುಲಭೂಷಣ್ ಜಾಧವ್ ಪ್ರಕರಣದ ತೀರ್ಪು ಹೊರ ಬೀಳಲಿದೆ. ಭಾರತದ ಪರ ಖ್ಯಾತ ವಕೀಲ ಹರೀಶ್ ಸಾಳ್ವೆ ಅವರು ತಮ್ಮ  ವಾದ ಮಂಡಿಸಿದ್ಗರು.

SCROLL FOR NEXT