ಭಾರತ- ಚೀನಾ 
ಪ್ರಧಾನ ಸುದ್ದಿ

ಮುಂದಿನ ತಿಂಗಳು ಸಭೆ ಸೇರಲಿರುವ ಎನ್ಎಸ್ ಜಿ: ಭಾರತದ ಸೇರ್ಪಡೆ ಸಾಧ್ಯತೆ ಕ್ಷೀಣ?

ವಿಶ್ವಸಂಸ್ಥೆಯ ಪರಮಾಣು ಪೂರೈಕೆದಾರ ಸಮೂಹ(ಎನ್ಎಸ್ ಜಿ) ಸಭೆ ಮುಂದಿನ ತಿಂಗಳು ನಡೆಯಲಿದ್ದು, ಭಾರತದ ಎನ್ಎಸ್ ಜಿ ಸದಸ್ಯತ್ವಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆಯುವ ಸಾಧ್ಯತೆ ಕ್ಷೀಣ..

ನವದೆಹಲಿ: ವಿಶ್ವಸಂಸ್ಥೆಯ ಪರಮಾಣು ಪೂರೈಕೆದಾರ ಸಮೂಹ(ಎನ್ಎಸ್ ಜಿ) ಸಭೆ ಮುಂದಿನ ತಿಂಗಳು ನಡೆಯಲಿದ್ದು, ಭಾರತದ ಎನ್ಎಸ್ ಜಿ ಸದಸ್ಯತ್ವಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆಯುವ ಸಾಧ್ಯತೆ ಕ್ಷೀಣವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 
ಕಳೆದ ವರ್ಷದ ಮೇ ತಿಂಗಳಲ್ಲಿ ಭಾರತ ಎನ್ಎಸ್ ಜಿ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಿತ್ತು. ಆ ನಂತರ ನಡೆದ ಎನ್ಎಸ್ ಜಿ ಸಭೆಯಲ್ಲಿ ಭಾರತಕ್ಕೆ ಸದಸ್ಯತ್ವ ನೀಡುವುದಕ್ಕೆ ಚೀನಾ ವಿರೋಧ ವ್ಯಕ್ತಪಡಿಸಿತ್ತು. ಅಮೆರಿಕ, ಫ್ರಾನ್ಸ್, ಬ್ರಿಟನ್, ರಷ್ಯಾ ಸೇರಿದಂತೆ ಅನೇಕ ರಾಷ್ಟ್ರಗಳು ಭಾರತದ ಸೇರ್ಪಡೆಗೆ ಬೆಂಬಲ ನೀಡಿದ್ದವಾದರೂ ಚೀನಾದ ಅಡ್ಡಗಾಲಿನಿಂದ ಭಾರತಕ್ಕೆ ಸದಸ್ಯತ್ವ ಕೈತಪ್ಪಿತ್ತು. ಈ ಬಾರಿಯೂ ಚೀನಾ ಭಾರತದ ಸದಸ್ಯತ್ವಕ್ಕೆ ಅಡ್ಡಗಾಲು ಹಾಕಲಿದೆ ಎಂದಿ ವಿಶ್ಲೇಷಿಸಲಾಗುತ್ತಿದೆ.  
ಎನ್ ಪಿಟಿಗೆ ಸಹಿ ಹಾಕದ ರಾಷ್ಟ್ರಗಳಿಗೆ ಎನ್ಎ ಜಿ ಸದಸ್ಯತ್ವ ನೀಡಬಾರದು ಎಂದು ಚೀನಾ ಎನ್ಎಸ್ ಜಿ ಮಂಡಳಿ ಸಭೆಯಲ್ಲಿ ಒತ್ತಡ ಹೇರುತ್ತಿದ್ದು, ಭಾರತದ ಸದಸ್ಯತ್ವ ವಿರೋಧಿಸುತ್ತಿರುವುದಕ್ಕೂ ಸಹ ಇದೇ ಕಾರಣ ನೀಡಿದೆ.  ಸ್ವಿಸ್ ರಾಜಧಾನಿ ಬರ್ನ್ ನಲ್ಲಿ ಮುಂದಿನ ತಿಂಗಳು ಎನ್ಎಸ್ ಜಿ ಸಭೆ ನಡೆಯಲಿದ್ದು ಮತ್ತೊಮ್ಮೆ ಭಾರತದ ಸದಸ್ಯತ್ವದ ಬಗ್ಗೆ ಚರ್ಚೆ ನಡೆಯಲಿದೆ. ಆದರೆ ಯಥಾಸ್ಥಿತಿ ಮುಂದುವರೆಯಲಿದ್ದು ಈ ಸಭೆಯಲ್ಲೂ ಭಾರತದ ಸದಸ್ಯತ್ವ ಸಿಗುವ ಸಾಧ್ಯತೆ ಕ್ಷೀಣವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT