ಪ್ರಧಾನ ಸುದ್ದಿ

ಐಎಎಸ್ ಅಧಿಕಾರಿ ತಿವಾರಿ ಉಸಿರುಗಟ್ಟಿ ಸಾವು: ಮರಣೋತ್ತರ ಪರೀಕ್ಷಾ ವರದಿ

Lingaraj Badiger
ಲಖನೌ: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತರಾಗಿದ್ದ ಐಎಎಸ್‌ ಅಧಿಕಾರಿ ಅನುರಾಗ್‌ ತಿವಾರಿ ಅವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ತಿಳಿಸಲಾಗಿದೆ. 
ವಿಧಿವಿಜ್ಞಾನ ತಜ್ಞ ಅಶೋಕ್ ಕುಮಾರ್ ವರ್ಮಾ ಸೇರಿದಂತೆ ನಾಲ್ವರು ವೈದ್ಯರ ತಂಡ ಅನುರಾಗ್ ತಿವಾರಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಕರ್ನಾಟಕ ವೃಂದದ ಐಎಎಸ್ ಅಧಿಕಾರಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ವರದಿ ನೀಡಿದ್ದಾರೆ. ಅಲ್ಲದೆ ರಾಸಾಯನಿಕ ವಿಶ್ಲೇಷಣೆಗಾಗಿ ವೈದ್ಯರು ಶ್ವಾಸಕೋಶ ಮತ್ತು ರಕ್ತದ ಮಾದರಿಯನ್ನು ಸಂಗ್ರಹಿಸಿದ್ದು, ಅದನ್ನು ವಿಶೇಷ ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯ(ಎಫ್ ಎಸ್ ಎಲ್)ಕ್ಕೆ ಕಳುಹಿಸಲಾಗಿದೆ. ಎಫ್ಎಸ್ಎಲ್ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ.
ಕಳೆದ ಮೇ 17ರಂದು ಲಖನೌನ ಹಜರತ್ ಗಂಜ್ ಮೀರಾಬಾಯ್ ಹೆಸ್ಟ್ ಹೌಸ್ ಬಳಿ 2007ನೇ ಬ್ಯಾಚ್ ನ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರ ಶವ ಪತ್ತೆಯಾಗಿತ್ತು. ರಾಜ್ಯದ ಐಎಎಸ್ ಅಧಿಕಾರಿ ತಮ್ಮ 36ನೇ ಹುಟ್ಟುಹಬ್ಬದಂದೆ ನಿಗೂಢವಾಗಿ ಸಾವನ್ನಪ್ಪಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಉತ್ತರ ಪ್ರದೇಶ ಸರ್ಕಾರ ಈ ಪ್ರಕರವಣನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ. 
SCROLL FOR NEXT