ಮೇಕೆಯನ್ನು ರಾಷ್ಚ್ರೀಯ ಸಹೋದರಿಯೆಂದು ಘೋಷಿಸಿ: ಎಎಪಿ ಮುಖಂಡ ಸಂಜಯ್ ಸಿಂಗ್ ಗೆ ಟ್ವಿಟ್ಟರಾರತಿ
: ಹಸುವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ ಎಂದು ರಾಜಸ್ತಾನ ಹೈಕೋರ್ಟ್ ಸಲಹೆ ನೀಡಿದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷದ ಮುಖಂಡ ಸಂಜಯ್ ಸಿಂಗ್ ...
ನವದೆಹಲಿ: ಹಸುವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ ಎಂದು ರಾಜಸ್ತಾನ ಹೈಕೋರ್ಟ್ ಸಲಹೆ ನೀಡಿದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷದ ಮುಖಂಡ ಸಂಜಯ್ ಸಿಂಗ್ ಮಾಡಿರುವ ಟ್ವೀಟ್ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಮೇಕೆಯನ್ನು ರಾಷ್ಟ್ರೀಯ ಸಹೋದರಿಯೆಂದು ಘೋಷಿಸುವಂತೆ ಸಂಜಯ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ರಾಷ್ಟ್ರಪಿತ ಮಹಾತ್ಮ ಗಾಂಧಿ ಮೇಕೆ ಹಾಲು ಕುಡಿಯುವುದು ತುಂಬಾ ಆರೋಗ್ಯಕರ ಎಂದು ಹೇಳಿದ್ದರು. ಹೀಗಾಗಿ ಮೇಕೆಯನ್ನು ರಾಷ್ಟ್ರೀಯ ಸಹೋದರಿಯೆಂದು ಘೋಷಿಸಬೇಕೆಂದು ಟ್ವಿಟ್ಟರ್ ನಲ್ಲಿ ಹೇಳಿದ್ದಾರೆ.
ಆಪ್ ಮುಖಂಡನ ಈ ಟ್ವೀಟ್ ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಟ್ವೀಟಿಗರು ಖಂಡಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.