ಪ್ರವಾಸ-ವಾಹನ

ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಜಮ್ಮು ಕಾಶ್ಮೀರದಲ್ಲಿ ಯೋಗ ಕೇಂದ್ರ: ಸಚಿವ ಸಿಟಿ ರವಿ

Raghavendra Adiga

ಬೆಂಗಳೂರು: ಕರ್ನಾಟಕದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಪ್ರವಾಸೋದ್ಯಮ ಇಲಾಖೆ ಜಮ್ಮು ಮತ್ತು ಕಾಶ್ಮೀರದಲ್ಲಿ ಯೋಗ ಕಲಿಕಾ ಕೇಂದ್ರವನ್ನು ಪ್ರಾರಂಭಿಸಲು ಯೋಜಿಸುತ್ತಿದೆ. ಇತ್ತೀಚೆಗೆ ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಬಳಿಕ ರಾಜ್ಯ ಸರ್ಕಾರ ಈ ಯೋಜನೆ ರೂಪಿಸಿದೆ.

ಕಣಿವೆ ರಾಜ್ಯದಲ್ಲಿ ಈ ಯೋಜನೆ ಜತೆಗೆ ಹೋಟೆಲ್‌ಗಳನ್ನು ಪ್ರಾರಂಭಿಸಲು ಇಲಾಖೆ ಯೋಜಿಸುತ್ತಿದೆ. ಇವುಗಳನ್ನು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್‌ಟಿಡಿಸಿ) ಸ್ಥಾಪಿಸಲಿದ್ದು ಕಾಶ್ಮೀರಕ್ಕೆ ತೆರಳುವ ಜನರು ಕರ್ನಾಟಕದಿಂದಲೇ ಕೊಠಡಿಗಳನ್ನು ಕಾಯ್ದಿರಿಸುವುದು ಸೇರಿದಂತೆ ಅಂತಹಾ ಹೋಟೆಲ್ ಗಳಲ್ಲಿ ರಾಜ್ಯದ ಪ್ರವಾಸಿಗರಿಗೆ ಆದ್ಯತೆ ನೀಡಲಾಗುತ್ತದೆ.

ಪ್ರವಾಸೋದ್ಯಮ ಸಚಿವ ಸಿ ಟಿ ರವಿ ಪತ್ರಿಕೆ ಜತೆಗೆ ಮಾತನಾಡಿ : “ಕರ್ನಾಟಕ, ವಿಶೇಷವಾಗಿ ಮೈಸೂರು ಯೋಗದ ವಿಶ್ವಪ್ರಸಿದ್ದ ಕೇಂದ್ರವಾಗಿದೆ. ಇತರ ರಾಜ್ಯಗಳು ಮತ್ತು ದೇಶಗಳ ಜನರು ಯೋಗ ಕಲಿಯಲು ಕರ್ನಾಟಕಕ್ಕೆ ಬರುತ್ತಾರೆ.ಇದೀಗ ಕಣಿವೆ ರಾಜ್ಯದಲ್ಲಿ ಯೋಗ ಕೇಂದ್ರವನ್ನು ಸ್ಥಾಪಿಸುವ ಮೂಲಕ, ನಾವು ಕರ್ನಾಟಕಕ್ಕೆ ವಿಶ್ವದಾದ್ಯಂತದ ಪ್ರವಾಸಿಗರನ್ನು ಆಕರ್ಷಿಸಬಹುದು. ಇದು ಆರಂಭಿಕ ಯೋಜನೆ. ನಾವು ಶೀಘ್ರದಲ್ಲೇ ಇದನ್ನು ಜಾರಿಗೊಳಿಸುತ್ತೇವೆ.  ಮುಂದಿನ ದಿನಗಳಲ್ಲಿ ಈ ವಿಚಾರವನ್ನು ಸಂಪುಟದಲ್ಲಿ ಚರ್ಚಿಸಿ ಅನುಮೋದನೆ ಪಡೆಯುತ್ತೇವೆ." ಎಂದರು. ಈ ಯೋಜನೆ ಮೈಸೂರು ಮತ್ತು ಇತರ ಸ್ಥಳಗಳಲ್ಲಿ ಪ್ರವಾಸಿಗರನ್ನ ಹೆಚ್ಚಿನ ಸಂಖ್ಯೆಯಲ್ಲಿ ಸೆಳೆಯಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.

“ಕರ್ನಾಟಕವು ಜಮ್ಮು ಮತ್ತು ಕಾಶ್ಮೀರದಂತೆಯೇ ಸಾಂಸ್ಕೃತಿಕ ಕೇಂದ್ರವಾಗಿದೆ. ನಾವು ಸಾಂಸ್ಕೃತಿಕ ವಿನಿಮಯ ಕೇಂದ್ರವನ್ನು ಸ್ಥಾಪಿಸುತ್ತೇವೆ ಅದು ಕಣಿವೆ  ರಾಜ್ಯ ಮತ್ತು ಕರ್ನಾಟಕ ಎರಡಕ್ಕೂ ಪ್ರಯೋಜನವನ್ನು ನೀಡುತ್ತದೆನಾವು ಪ್ರವಾಸೋದ್ಯಮ ಮಾಹಿತಿ ಕೇಂದ್ರವನ್ನು ಸಹ ತೆರೆಯಲಿದ್ದು  ಅಲ್ಲಿ ನಾವು ವಿವಿಧ ಪ್ರವಾಸಿ ಸ್ಥಳಗಳ ವಿವರಗಳನ್ನು ಚಿತ್ರಗಳು, ಕಿರುಪುಸ್ತಕಗಳು ಮತ್ತು ಇತರ ಮಾಧ್ಯಮಗಳ ಮೂಲಕ ಪ್ರದರ್ಶಿಸುತ್ತೇವೆ ”ಎಂದು ಅವರು ಹೇಳಿದರು.

ಈ ಹಿಂದೆ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ರೆಸಾರ್ಟ್‌ಗಳನ್ನು ನಿರ್ಮಿಸುವ ಬಗ್ಗೆ ಮಹಾರಾಷ್ಟ್ರ ಸರ್ಕಾರ ತೀರ್ಮಾನ ತೆಗೆದುಕೊಂಡಿತ್ತು.

SCROLL FOR NEXT