ನರೇಂದ್ರ ಮೋದಿ 
ಮೋದಿ ಸರ್ಕಾರಕ್ಕೆ 2 ವರ್ಷ

ಪ್ರಧಾನಿ ಮೋದಿ ಸರ್ಕಾರದ ಪ್ರಮುಖ ಹೆಗ್ಗಳಿಕೆಗಳು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ 2 ವರ್ಷ ಪೂರೈಸಿದೆ. ಈ ಮಧ್ಯೆ ಮೋದಿ ಸರ್ಕಾರದ ಪ್ರಮುಖ ಹೆಗ್ಗಳಿಕೆಗಳು ಈ ಕೆಳಕಂಡಂತಿವೆ...

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ 2 ವರ್ಷ ಪೂರೈಸಿದೆ. ಈ ಮಧ್ಯೆ ಮೋದಿ ಸರ್ಕಾರದ ಪ್ರಮುಖ ಹೆಗ್ಗಳಿಕೆಗಳು ಈ ಕೆಳಕಂಡಂತಿವೆ...

ಯೆಮೆನ್ ಕಾರ್ಯಾಚರಣೆ

ಯುದ್ಧಪೀಡಿತ ಯೆಮೆನ್‌ನಲ್ಲಿ ಸಿಲುಕಿದ್ದ 4 ಸಾವಿರ ಭಾರತೀಯರನ್ನು ರಕ್ಷಿಸಿ, ತಾಯ್ನಾಡಿಗೆ ಕರೆತಂದ ಹೆಗ್ಗಳಿಕೆ ಮೋದಿ ಸರ್ಕಾರಕ್ಕೆ ಸಲ್ಲುತ್ತದೆ. ಆಪರೇಷನ್ ರಾಹತ್ ಹೆಸರಿನಲ್ಲಿ ಕೇಂದ್ರ ಸರ್ಕಾರ ರಕ್ಷಣಾ ಕಾರ್ಯಾಚರಣೆ ನಡೆಸಿತ್ತು. ವಿದೇಶಾಂಗ ಖಾತೆ ರಾಜ್ಯ ಸಚಿವ ಜನರಲ್ ವಿ.ಕೆ ಸಿಂಗ್ ಯೆಮನ್ ಗೆ ತೆರಳಿ ಅಲ್ಲಿ ಸಿಲುಕಿದ್ದ ಭಾರತೀಯರನ್ನು ಏರ್ ಇಂಡಿಯಾ ವಿಮಾನದ ಮೂಲಕ ಭಾರತಕ್ಕೆ ಸುರಕ್ಷಿತವಾಗಿ ಕರೆತರುವಲ್ಲಿ ಯಶಸ್ವಿಯಾದರು. ಇನ್ನು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರ ಪಾತ್ರ ಇಲ್ಲಿ ಬಹುಮುಖ್ಯವಾಗಿದೆ.

ಭೂಗತ ದೊರೆ ಚೋಟಾ ರಾಜನ್ ಬಂಧನ
ಕುಖ್ಯಾತ ಭೂಗತ ಜಗತ್ತಿನ ಕ್ರಿಮಿನಲ್, ಮೊಸ್ಟ್ ವಾಂಟೆಡ್  ಚೋಟಾ ರಾಜನ್ ಕಳೆದ 2 ದಶಕಗಳಿಂದ ಪೊಲೀಸರ ಕಣ್ಣು ತಪ್ಪಿಸಿ ವಿದೇಶಗಳಲ್ಲಿ ತಲೆಮರೆಸಿಕೊಂಡಿದ್ದ. ಈಗಿದ್ದರು ಆತನ ಸಂಪೂರ್ಣ ಚಲನವಲನ ಮೇಲೆ ಕಣ್ಣೀಟ್ಟಿದ್ದ ನಮ್ಮ ಗುಪ್ತಚರ ಇಲಾಖೆ ಆಸ್ಟ್ರೇಲಿಯಾದ ಸಿಡ್ನಿಯಿಂದ ಬಾಲಿಗೆ ಪ್ರಯಾಣಿಸುತ್ತಿರುವ ಮಾಹಿತಿ ಸಂಗ್ರಹಿಸಿ ಬಾಲಿ ಪೊಲೀಸರಿಗೆ ನೀಡಿದ್ದರು. ರಾಜನ್ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಬಾಲಿ ಪೊಲೀಸರು ರಾಜನ್ ನನ್ನು ವಶಕ್ಕೆ ಪಡೆದು ಭಾರತಕ್ಕೆ ಗಡಿಪಾರು ಮಾಡಿದ್ದರು.

ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ಯೋಗದ ಮಹತ್ವದ ಬಗ್ಗೆ ಸಾರಿ ಯೋಗವನ್ನು ಅಂತಾರಾಷ್ಟ್ರೀ ಯೋಗ ದಿನವಾಗಿ ಘೋಷಿಸಬೇಕು ಎಂದು ವಿಶ್ವಸಂಸ್ಥೆಯಲ್ಲಿ ವಿಷಯ ಮಂಡಿಸಿದ್ದರು. ಇದರ ಫಲವಾಗಿ ವಿಶ್ವಸಂಸ್ಥೆ ಜೂನ್ 21ರಂದು ವಿಶ್ವ ಯೋಗ ದಿನ ಎಂದು ಘೋಷಿಸಿತ್ತು. ಇದು ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಭಾರತದ ಪತಾಕೆ ಹಾರಿಸಿದ ಹೆಗ್ಗಳಿಕೆಗಳಲ್ಲಿ ಒಂದು. ಜೂ. 21ರಂದು ವಿಶ್ವ ಯೋಗ ದಿನಾಚರಣೆಯನ್ನು 177ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಆಚರಿಸಲಾಗುತ್ತದೆ. ಇದು ಭಾರತದ ಕೊಡುಗೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳಬಹುದು.

ಭಾರತಕ್ಕೆ ಅಸ್ಸಾಂ ಬಂಡುಕೋರನ ಹಸ್ತಾಂತರ
ಹಲವು ದುಷ್ಕೃತ್ಯಗಳ ಮೂಲಕ ಭಾರತಕ್ಕೆ ಬೇಕಾಗಿದ್ದ ನಿಷೇಧಿತ ಉಲ್ಫಾ(ಯುನೈಟೆಡ್ ಲಿಬರೇಷನ್ ಫ್ರಂಟ್ ಆಫ್ ಅಸ್ಸಾಂ) ಸಂಘಟನೆಯ ಮುಖ್ಯಸ್ಥ ಹಾಗೂ ಅಸ್ಸಾಂನ ಬಂಡುಕೋರ ಅನೂಪ್ ಚೇತಿಯಾನನ್ನು ಬಾಂಗ್ಲಾದೇಶದಿಂದ ಭಾರತಕ್ಕೆ ಹಸ್ತಾಂತರಿಸುವಂತೆ ಮಾಡಿದ ಕೀರ್ತೀ ಕೇಂದ್ರ ಸರ್ಕಾರಕ್ಕೆ ಸಲ್ಲುತ್ತದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು ಬಾಂಗ್ಲಾದೇಶ ಅಧಿಕಾರಿಗಳೊಂದಿಗೆ ಹಲವು ಬಾರಿ ಚರ್ಚೆ ನಡೆಸಿದ್ದರು. ಈ ಮಧ್ಯೆ ಪ್ರಧಾನಿ ಮೋದಿ ಅವರ ಮಧ್ಯಪ್ರವೇಶದಿಂದಾಗಿ ಚೇತಿಯಾನನ್ನು ಭಾರತಕ್ಕೆ ಹಸ್ತಾಂತರಿಸಲು ಬಾಂಗ್ಲಾ ಸಮ್ಮತಿಸಿತ್ತು. ಅದರ ಫಲವಾಗಿ 17 ವರ್ಷಗಳ ಬಳಿಕ ಅನೂಪ್ ಚೇತಿಯಾನನ್ನು ಢಾಕಾದಲ್ಲಿ ಬಂಧಿಸಿ ಭಾರತಕ್ಕೆ ಕರೆತರುವಲ್ಲಿ ಸಿಬಿಐ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಮಯನ್ಮಾರ್ ಗೆ ನುಗ್ಗಿ ಉಗ್ರರನ್ನು ಸದೆಬಡಿದ ಭಾರತೀಯ ಸೇನೆ
ಮಣಿಪುರದಲ್ಲಿ 18 ಯೋಧರನ್ನು ಹತ್ಯೆ ಮಾಡಿದ್ದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಭಾರತೀಯ ಸೇನೆ ಮಯನ್ಮಾರ್ ನಲ್ಲಿ ಅಡಗಿದ್ದ ಉಗ್ರರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ 20 ದಂಗೆ ಕೋರರನ್ನು ಹತ್ಯೆ ಮಾಡಿತ್ತು. ಇದು ಎನ್ಡಿಎ ಸರ್ಕಾರದ ಅವಧಿಯಲ್ಲಿ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಒಂದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

SCROLL FOR NEXT