ಹಿಮಾಚಲ ಪ್ರದೇಶದ ಕುಲು, ಶಿಮ್ಲಾ ಮತ್ತು ಮಂಡಿ ಜಿಲ್ಲೆಗಳಲ್ಲಿ ಗುರುವಾರ ಸಂಭವಿಸಿದ ಬಹು ಮೇಘಸ್ಫೋಟದಲ್ಲಿ ಸುಮಾರು 50 ಮಂದಿ ನಾಪತ್ತೆಯಾಗಿದ್ದಾರೆ ಮತ್ತು ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮನಾಲಿ ಪ್ರದೇಶ ದೇಶದ ಇತರ ಭಾಗಗಳಿಂದ ಸಂಪರ್ಕ ಕಳೆದುಕೊಂಡಿದೆ. ಬಿಯಾಸ್ ನದಿಯ ಹರಿವು ಹೆಚ್ಚಾಗುತ್ತಿದ್ದಂತೆ ಭಯಾನಕ ದೃಶ್ಯಗಳು ಬರುತ್ತಿವೆ.